ETV Bharat / bharat

ಸರ್ಕಾರಿ ಶಾಲಾ ಶಿಕ್ಷಕರಿಗೆ ಆನ್​​​ಲೈನ್​​ ಇಂಗ್ಲಿಷ್​ ಶಿಕ್ಷಣ: ಈ ಸರ್ಕಾರದ ಮಹತ್ವದ ಯೋಜನೆ

author img

By

Published : Jul 29, 2020, 7:03 AM IST

ಇಂಗ್ಲಿಷ್​ ಶಿಕ್ಷಕರಿಗೆ ಅಮೆರಿಕ ರಾಯಭಾರ ಕಚೇರಿಯ ಸಹಭಾಗಿತ್ವದಲ್ಲಿ ಆನ್​ಲೈನ್​​​ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮವನ್ನ ಆರಂಭಿಸಲಾಗಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಚಾಲನೆ ನೀಡಿದರು.

Delhi government starts training for English teachers in partnership with American Embassy
ಸರ್ಕಾರಿ ಶಾಲಾ ಶಿಕ್ಷಕರಿಗೆ ಆನ್​​​ಲೈನ್​​ ಇಂಗ್ಲಿಷ್​ ಶಿಕ್ಷಣ

ನವದೆಹಲಿ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಇಂಗ್ಲಿಷ್​ ಶಿಕ್ಷಕರಿಗೆ ಅಮೆರಿಕ ರಾಯಭಾರ ಕಚೇರಿಯ ಸಹಭಾಗಿತ್ವದಲ್ಲಿ ಆನ್​ಲೈನ್​​​ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮವನ್ನ ಆರಂಭಿಸಲಾಗಿದೆ.

ಎಂಟು ವಾರಗಳ ಈ ಕೋರ್ಸ್‌ನಲ್ಲಿ ದೆಹಲಿ ಸರ್ಕಾರದ 550 ಶಿಕ್ಷಕರು ಭಾಗವಹಿಸಿದ್ದರು. ಈ ತರಬೇತಿ ಕಾರ್ಯಕ್ರಮಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ಕಲಿಯುವುದು ನಮ್ಮ ಸಂವಹನ ಸಾಮರ್ಥ್ಯದ ವಿಸ್ತರಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲಿ ಪ್ರಾವಿಣ್ಯತೆ ಪಡೆಯಲು ಹಾಗೂ ವಿಶ್ವಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶ ಹೊಂದಿದ್ದಾರೆ ಎಂದು ಡಿಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.