ETV Bharat / bharat

ಭಾರಿ ಮಳೆಯಿಂದ ಮೂರು ಅಂತಸ್ತಿನ ಕಟ್ಟಡ ಕುಸಿತ.. ನಾಲ್ವರ ಸಾವು

author img

By

Published : Aug 10, 2019, 8:56 AM IST

ಮೂರು ಅಂತಸ್ತಿನ ಕಟ್ಟಡ ಕುಸಿತ

ಗುಜರಾತ್​ನಲ್ಲಿ ಭಾರಿ ಮಳೆಯಿಂದ ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದು 4 ಮಂದಿ ಸಾವಿಗೀಡಾಗಿದ್ದಾರೆ.

ಖೇಡಾ(ಗುಜರಾತ್): ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಮೂರು ಅಂತಸ್ತಿನ ಕಟ್ಟಡ ಕುಸಿತ

ಗುಜರಾತ್​ನ ಖೇಡಾ ಜಿಲ್ಲೆಯ ಪ್ರಗತಿನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈವರೆಗೆ 4 ರಿಂದ 5 ಜನರನ್ನ ರಕ್ಷಣೆ ಮಾಡಲಾಗಿದೆ. ಭಾರಿ ಮಳೆಯಿಂದ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.