ETV Bharat / bharat

ವಿದ್ಯಾರ್ಥಿಗಳನ್ನು ಕರೆತರಲು ನಿರ್ದೇಶಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

author img

By

Published : Apr 23, 2020, 6:39 PM IST

patna high court
patna high court

ರಾಜ್ಯದ ವಿದ್ಯಾರ್ಥಿಗಳನ್ನು ಮರಳಿ ಕರೆತರುವಂತೆ ಬಿಹಾರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್​ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಬಿಹಾರ ಸರ್ಕಾರಕ್ಕೆ ನೋಟಿಸ್​ ಜಾರಿಗೊಳಿಸಿ ವಿಚಾರಣೆಯನ್ನು ಏ.27 ಕ್ಕೆ ಮುಂದೂಡಿದೆ.

ಪಾಟ್ನಾ: ಲಾಕ್​ಡೌನ್​ನಿಂದಾಗಿ ರಾಜಸ್ಥಾನದ ಕೋಟಾದಲ್ಲಿ ಸಿಕ್ಕಿ ಬಿದ್ದಿರುವ ಬಿಹಾರ ವಿದ್ಯಾರ್ಥಿಗಳನ್ನು ಮರಳಿ ಕರೆತರುವಂತೆ ಕೋರಿ ಪಾಟ್ನಾ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರುವಂತೆ ಬಿಹಾರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಬಿಹಾರ ಸರ್ಕಾರಕ್ಕೆ ನೋಟಿಸ್​ ಜಾರಿಗೊಳಿಸಿ ವಿಚಾರಣೆಯನ್ನು ಏ.27 ಕ್ಕೆ ಮುಂದೂಡಿದೆ.

ಪವನಕುಮಾರ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ನ್ಯಾಯಮೂರ್ತಿ ಹೇಮಂತ ಕುಮಾರ ಶ್ರೀವಾಸ್ತವ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಿತು. ಕೋಟಾದಲ್ಲಿ ಸಾಕಷ್ಟು ಸಂಖ್ಯೆಯ ಬಿಹಾರ ವಿದ್ಯಾರ್ಥಿಗಳಿದ್ದಾರೆ. ಲಾಕ್​ಡೌನ್​ನಿಂದಾಗಿ ಅವರೆಲ್ಲ ತೀರಾ ಕಷ್ಟದಲ್ಲಿದ್ದಾರೆ. ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶ ಸರ್ಕಾರಗಳು ಕೋಟಾದಲ್ಲಿದ್ದ ತಮ್ಮ ವಿದ್ಯಾರ್ಥಿಗಳನ್ನು ಮರಳಿ ಕರೆಸಿಕೊಂಡಿವೆ. ಆದರೆ ಬಿಹಾರ ಸರ್ಕಾರ ಆ ನಿಟ್ಟಿನಲ್ಲಿ ಏನೂ ಮಾಡುತ್ತಿಲ್ಲ ಎಂದು ಪಿಐಎಲ್​ನಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.