ETV Bharat / bharat

ಡಿಕೆಶಿ​ ಅವರನ್ನ ಸಮರ್ಥಿಸಿಕೊಂಡರೆ ಇಡೀ 'ಕೈ' ಪಕ್ಷವೇ ಭ್ರಷ್ಟ ಎಂದರ್ಥ: ಸಂಬಿತ್​​​​​​​​ ಪತ್ರಾ

author img

By

Published : Oct 9, 2019, 8:03 PM IST

ಕಾಂಗ್ರೆಸ್​ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಬಂಧನದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕಾಂಗ್ರೆಸ್​ ಹೇಳಿಕೆ ನೀಡುತ್ತಿದ್ದು, ಅದರಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಬಿಜೆಪಿ ವಕ್ತಾರ ಸಂಬಿತ್​ ಪತ್ರಾ ಹೇಳಿದ್ದಾರೆ.

ಬಿಜೆಪಿ ವಕ್ತಾರ ಸಂಬಿತ್​ ಪತ್ರಾ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್​ ಬಂಧನವಾಗಿದ್ದು, ಅವರ ಬಂಧನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಈಗಾಗಲೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಇದೀಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ ವಕ್ತಾರ ಸಂಬಿತ್​ ಪತ್ರಾ ಈಟಿವಿ ಭಾರತ​​ ಜತೆ ಮಾತನಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್​ ಡಿ.ಕೆ.ಶಿವಕುಮಾರ್​ ಅವರನ್ನ ಸಮರ್ಥನೆ ಮಾಡಿಕೊಳ್ಳುತ್ತಿದ್ದರೆ, ಇಡೀ ಪಕ್ಷವೇ ಭ್ರಷ್ಟಾಚಾರದಿಂದ ಕೂಡಿದೆ ಎಂದರ್ಥ ಎಂದು ಹೇಳಿದ್ದಾರೆ.

ಬಿಜೆಪಿ ವಕ್ತಾರ ಸಂಬಿತ್​ ಪತ್ರಾ

ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪ ಮಾಡಿದೆ. ಆದರೆ ಕಾಂಗ್ರೆಸ್​ ಮುಖಂಡ ಡಿಕೆಶಿ ಅಕ್ರಮ ಹಣ ವರ್ಗಾವಣೆ​ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಬಿಜೆಪಿ ಪಾರದರ್ಶಕ ಆಡಳಿತ ನಡೆಸುತ್ತಿದ್ದು, ಭ್ರಷ್ಟರ ವಿರುದ್ಧ ಸಮರ ಸಾರಿದೆ ಎಂದಿದ್ದಾರೆ.

ದೇಶದಲ್ಲಿ ಭ್ರಷ್ಟಾಚಾರ ಉತ್ತೇಜಿಸುವ ಉದ್ದೇಶದಿಂದ ಕಾಂಗ್ರೆಸ್​ ಈ ರೀತಿಯ ಸುಳ್ಳು ಹೇಳಿಕೆ ನೀಡುತ್ತಿದೆ. ಡಿ.ಕೆ.ಶಿವಕುಮಾರ್​ ಬಂಧನವಾಗುವುದಕ್ಕೂ ಒಂದು ದಿನ ಮುಂಚಿತವಾಗಿ ಅಂತಿಮವಾಗಿ ನನ್ನನ್ನು ಬಂಧಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದಕ್ಕೆ ನಾನು ಅಭಿನಂದಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದರು. ಇದು ಸಹ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಹೇಳಿದ್ದಾರೆ.

Intro:Body:

ಕಾಂಗ್ರೆಸ್​ ಡಿಕೆ ಶಿವಕುಮಾರ್​ ಅವರನ್ನ ಸಮರ್ಥಿಸುತ್ತಿದ್ದರೆ, ಇಡೀ 'ಕೈ' ಪಕ್ಷವೇ ಭ್ರಷ್ಟ: ಸಂಬಿತ್ ಪತ್ರಾ



ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಡಿಕೆ ಶಿವಕುಮಾರ್​ ಬಂಧನವಾಗಿದ್ದು, ಅವರ ಬಂಧನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಈಗಾಗಲೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. 



ಇದೀಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ ವಕ್ತಾರ ಸಂಬಿತ್​ ಪತ್ರಾ ಈ ಟಿವಿ ಭಾರತ್​​ ಜತೆ ಮಾತನಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್​ ಡಿಕೆ ಶಿವಕುಮಾರ್​ ಅವರನ್ನ ಸಮರ್ಥನೆ ಮಾಡಿಕೊಳ್ಳುತ್ತಿದ್ದರೆ, ಇಡೀ ಪಕ್ಷವೇ ಭ್ರಷ್ಟಾಚಾರದಿಂದ ಕೂಡಿದೆ ಎಂದು ಹೇಳಿದ್ದಾರೆ. 



ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನ ದುರುಪಯೋಗ ಪಡೆಸಿಕೊಂಡಿದೆ ಎಂದು ಆರೋಪ ಮಾಡಿದೆ. ಆದರೆ ಕಾಂಗ್ರೆಸ್​ ಮುಖಂಡ ಡಿಕೆಶಿ ಮನಿ ಲ್ಯಾಂಡರಿಂಗ್​ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಬಿಜೆಪಿ ಪಾರದರ್ಶಕ ಆಡಳಿತ ನಡೆಸುತ್ತಿದ್ದು, ಭ್ರಷ್ಟರ ವಿರುದ್ಧ ಸಮರ ಸಾರಿದೆ ಎಂದಿದ್ದಾರೆ. 



ದೇಶದಲ್ಲಿ ಭ್ರಷ್ಟಾಚಾರ ಉತ್ತೇಜಿಸುವ ಉದ್ದೇಶದಿಂದ ಕಾಂಗ್ರೆಸ್​ ಈ ರೀತಿಯ ಸುಳ್ಳು ಹೇಳಿಕೆ ನೀಡುತ್ತಿದೆ. ಡಿಕೆ ಶಿವಕುಮಾರ್​ ಬಂಧನವಾಗುವುದಕ್ಕೂ ಒಂದು ದಿನ ಮುಂಚಿತವಾಗಿ ಅಂತಿಮವಾಗಿ ನನ್ನನ್ನು ಬಂಧಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದಕ್ಕೆ ನಾನು ಅಭಿನಂದಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದರು ಇದು ಸಹ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಹೇಳಿದ್ದಾರೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.