ETV Bharat / bharat

ಕುಲ್ಗಾಮ್​ನಲ್ಲಿ ಗುಂಡಿನ ಕಾಳಗ.. ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

author img

By

Published : Apr 27, 2020, 12:12 PM IST

Three militants killed in encounter in Kulgam
ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಶ್ರೀನಗರ: ಜಮ್ಮು - ಕಾಶ್ಮೀರದಕ ಕುಲ್ಗಾಮ್​​ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಖಾಜಿಗುಂಡ್ ಪ್ರದೇಶದ ಲೋವರ್ ಮುಂಡಾದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ವೇಳೆ ಗುಂಡಿನ ಕಾಳಗ ಪ್ರಾರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋವರ್ ಮುಂಡಾದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ. ಈ ಹಿಂದಿನ ವರದಿ ಬಂದಾಗ ಕಾರ್ಯಾಚರಣೆ ಪ್ರಗತಿಯಲ್ಲಿತ್ತು ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.