ETV Bharat / bharat

ಸೋಂಕಿತನ ಜತೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ 72 ಗಂಟೆ ಒಳಗೆ ಪತ್ತೆಹಚ್ಚಿ: ಮೋದಿ ತಾಕೀತು

author img

By

Published : Aug 11, 2020, 10:29 PM IST

ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೋವಿಡ್ -19 ಪ್ರಸಕ್ತ ಪರಿಸ್ಥಿತಿ ಮತ್ತು ರೋಗ ನಿಭಾಯಿಸಲು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.

Modi Meets Cms
ಮೋದಿ ಸಿಎಂಗಳ ಸಭೆ

ನವದೆಹಲಿ: ಆರಂಭಿಕ 72 ಗಂಟೆಗಳಲ್ಲಿ ನಾವು ಪ್ರಕರಣಗಳನ್ನು ಗುರುತಿಸಲು ಸಾಧ್ಯವಾದರೆ ಕೊರೊನಾ ಸೋಂಕು ಹರಡುವಿಕೆ ನಿಧಾನಗೊಳಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೋವಿಡ್ -19 ಪ್ರಸಕ್ತ ಪರಿಸ್ಥಿತಿ ಮತ್ತು ರೋಗ ನಿಭಾಯಿಸಲು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.

ಸುಮಾರು ಶೇ 80ರಷ್ಟು ಸಕ್ರಿಯ ಪ್ರಕರಣಗಳು ಇಂದು ಭಾಗಿಯಾಗಿರುವ 10 ರಾಜ್ಯಗಳಿಂದಲೇ ಬಂದಿವೆ. ಈ ಹತ್ತು ರಾಜ್ಯಗಳಲ್ಲಿ ವೈರಾಣು ಮಣಿಸಿದರೆ ಕೋವಿಡ್-19 ವಿರುದ್ಧದ ಸಮರದಲ್ಲಿ ಇಡೀ ದೇಶವೇ ವಿಜಯಶಾಲಿಯಾಗಿ ಹೊರಹೊಮ್ಮುತ್ತದೆ ಎಂದರು.

ದಿನನಿತ್ಯದ ಪರೀಕ್ಷೆಗಳ ಸಂಖ್ಯೆ ಸುಮಾರು 7 ಲಕ್ಷ ತಲುಪಿದ್ದು, ಈ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದು ರೋಗವನ್ನು ಆರಂಭದಲ್ಲೇ ಗುರುತಿಸಿ ನಿಯಂತ್ರಿಸಲು ನೆರವಾಗಿದೆ. ವಿಶ್ವದಲ್ಲೇ ಭಾರತದ ಸರಾಸರಿ ಮರಣ ಪ್ರಮಾಣ ಅತ್ಯಂತ ಕಡಿಮೆ ಇದೆ ಮತ್ತು ನಿರಂತರವಾಗಿ ಇಳಿಕೆಯಾಗುತ್ತಿದೆ. ಸಕ್ರಿಯ ಪ್ರಕರಣಗಳ ಶೇಕಡಾವಾರು ದರ ಸಹ ಇಳಿಕೆಯಾಗುತ್ತಿದೆ. ಆದರೆ, ಚೇತರಿಕೆ ಪ್ರಮಾಣ ಹೆಚ್ಚುತ್ತಿದೆ. ಈ ಕ್ರಮಗಳು ಜನರ ಆತ್ಮವಿಶ್ವಾಸ ಹೆಚ್ಚಿಸಿವೆ. ಮರಣ ಪ್ರಮಾಣವನ್ನು ಶೇ 1ಕ್ಕಿಂತ ಕಡಿಮೆ ಮಾಡುವ ಗುರಿಯನ್ನು ಶೀಘ್ರದಲ್ಲೇ ಸಾಧಿಸಬಹುದು ಎಂದು ಹೇಳಿದರು.

ಬಿಹಾರ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣಗಳಲ್ಲಿ ಪರೀಕ್ಷೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಮರದಲ್ಲಿ ಕಂಟೈನ್‌ ಮೆಂಟ್, ಸಂಪರ್ಕ ಪತ್ತೆ ಮತ್ತು ಕಣ್ಗಾವಲು ಅತ್ಯಂತ ಪರಿಣಾಮಕಾರಿ ಅಸ್ತ್ರಳಾಗಿವೆ. ಜನರು ಜಾಗೃತರಾಗಿ ನಮ್ಮ ಪ್ರಯತ್ನಗಳಿಗೆ ನೆರವಾಗುತ್ತಿದ್ದಾರೆ. ಇದರ ಪರಿಣಾಮವಾಗಿ ಹೊಂ ಕ್ವಾರಂಟೈನ್ ಪರಿಣಾಮಕಾರಿಯಾಗಿ ಬಳಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದರು.

ಆರೋಗ್ಯ ಸೇತು ಅಪ್ಲಿಕೇಶನ್‌ನ ಉಪಯುಕ್ತತೆ ಉಲ್ಲೇಖಿಸಿದ ಪ್ರಧಾನಿ, ತಜ್ಞರ ಪ್ರಕಾರ ಆರಂಭಿಕ 72 ಗಂಟೆಗಳಲ್ಲಿ ನಾವು ಪ್ರಕರಣಗಳನ್ನು ಗುರುತಿಸಲು ಸಾಧ್ಯವಾದರೇ ವೈರಾಣು ಹರಡುವಿಕೆಯನ್ನು ನಿಧಾನಗೊಳಿಸಬಹುದು. 72 ಗಂಟೆಗಳ ಒಳಗೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪತ್ತೆಹಚ್ಚಿ ಮತ್ತು ಪರೀಕ್ಷಿಸುವ ಅಗತ್ಯವಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.