ETV Bharat / bharat

ಮಾಜಿ ಪಿಎಂ ನರಸಿಂಹ ರಾವ್ ಕೊಡುಗೆ  ಸ್ಮರಿಸಿದ ಕಾಂಗ್ರೆಸ್

author img

By

Published : Jul 25, 2020, 12:12 PM IST

ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ಪ್ರಣಬ್ ಮುಖರ್ಜಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನರಸಿಂಹ ರಾವ್ ಅವರ ನಾಯಕತ್ವ, ಸಾಧನೆಗಳು ಮತ್ತು ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ.

pvn
pvn

ಹೈದರಾಬಾದ್ (ತೆಲಂಗಾಣ): ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವದ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗವಹಿಸಿದ್ದರು.

ಕಾಂಗ್ರೆಸ್ ಮುಖಂಡರಾದ ಪಿ ಚಿದಂಬರಂ ಮತ್ತು ಜೈರಾಮ್ ರಮೇಶ್ ಕೂಡ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಮುಖ್ಯ ಕಾರ್ಯಕ್ರಮವನ್ನು ಗಾಂಧಿ ಭವನದಲ್ಲಿ ನಡೆಸಲಾಯಿತು. ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನೇರ ಪ್ರಸಾರ ಮಾಡಲಾಯಿತು. ಮತ್ತು ಎಲ್ಲಾ ಡಿಸಿಸಿ ಕಚೇರಿಗಳು ಮತ್ತು ಇತರ ಸ್ಥಳಗಳಲ್ಲಿ ಪ್ರೊಜೆಕ್ಟರ್ ಪರದೆಗಳ ಮೂಲಕ ಪ್ರದರ್ಶಿಸಲಾಯಿತು.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮುಖಂಡ ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಸಂದೇಶ ಕಳುಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.