ETV Bharat / bharat

ವಲಸೆ ಕಾರ್ಮಿಕರ ಸಮಸ್ಯೆಗಳೊಂದಿಗೆ ರಾಹುಲ್ ಗಾಂಧಿ ರಾಜಕೀಯ: ಬಿಜೆಪಿ ಪುನರುಚ್ಚಾರ

author img

By

Published : May 24, 2020, 3:44 PM IST

ಕಾಂಗ್ರೆಸ್​ ಆಡಳಿತದಲ್ಲಿ ಇಲ್ಲದ ರಾಜ್ಯಗಳಿಗೆ ತೆರಳಿ ವಲಸೆ ಕಾರ್ಮಿಕರೊಂದಿಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ವಲಸೆ ಕಾರ್ಮಿಕರ ಸಮಸ್ಯೆಗಳೊಂದಿಗೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆಪಾಧಿಸಿದೆ.

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಲಸೆ ಕಾರ್ಮಿಕರ ಸಮಸ್ಯೆಗಳೊಂದಿಗೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ಜಿವಿಎಸ್​ ನರಸಿಂಹರಾವ್​, ಗಾಂಧಿ ಕುಟುಂಬವು ಕಾಂಗ್ರೆಸ್​ ಅಧಿಕಾರದಲ್ಲಿರುವ ರಾಜ್ಯಗಳಾದ ಚತ್ತೀಸ್​ಗಢ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಜಾರ್ಖಂಡ್​ ರಾಜ್ಯಗಳಲ್ಲಿ ವಲಸೆ ಕಾರ್ಮಿಕರಿಗಾಗಿ ಏನು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಊರಿಗೆ ತೆರಳಲು ಅವಕಾಶ ನೀಡಿಲ್ಲ. ರಾಹುಲ್ ಗಾಂಧಿ ಕ್ಯಾಮರ ರಾಜಕಾರಣದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್​ ಆಡಳಿದಲ್ಲಿದ್ದ ರಾಜ್ಯಗಳಿಗೆ ಭೇಟಿ ನೀಡಿ ಅವರು ವಲಸಿಗರನ್ನು ಮಾತನಾಡಿಸುತ್ತಿದ್ದಾರೆ, ಈ ಮೂಲಕ ಕಣ್ಣೀರಿನ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ವಲಸೆ ಕಾರ್ಮಿಕರೊಂದಿಗೆ ಮಾತನಾಡುತ್ತಿರುವ ಸಾಕ್ಷ್ಯ ಚಿತ್ರವೊಂದನ್ನು ಕಾಂಗ್ರೆಸ್​ ಬಿಡುಗಡೆ ಮಾಡಿದೆ. ಆ ಬಳಿಕ ಬಿಜೆಪಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಲು ಶುರು ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.