ETV Bharat / bharat

ಸಿಎಎ ವಿರುದ್ಧ ಸುಪ್ರೀಂಕೋರ್ಟ್​ ಮೊರೆ ಹೋದ ರಾಜಸ್ಥಾನ ಸರ್ಕಾರ

author img

By

Published : Mar 17, 2020, 12:01 AM IST

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್​ಗೆ ಮೊರೆ ಹೋಗಿದೆ.

CAA
ರಾಜಸ್ಥಾನ ಸರ್ಕಾರ

ನವದೆಹಲಿ: ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಲು ಕಾರಣವಾದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ದೇಶದಲ್ಲಿ ಶಾಂತಿ ಮತ್ತು ಸಹಬಾಳ್ವೆಯನ್ನು ಕಾಪಾಡಲು ಸಿಎಎ ಕಾಯ್ದೆಯನ್ನು ಹಿಂಪಡೆಯುವುದು ಅಗತ್ಯವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯ ಮಾಡಿದ್ದಾರೆ. ಅಲ್ಲದೇ ಈ ಕಾನೂನಿಂದ ಮೂಲಭೂತ ಹಕ್ಕುಗಳಾದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಕೇರಳದ ನಂತರ ಸಿಎಎ ಮಾನ್ಯತೆ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೊರೆ ಹೋದ ಎರಡನೇ ರಾಜ್ಯ ರಾಜಸ್ಥಾನವಾಗಿದೆ.

ಹೊಸದಾಗಿ ತಿದ್ದಪಡಿ ಮಾಡಿದ ಕಾನೂನಿನ ಪ್ರಕಾರ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ದೇಶಗಳಲ್ಲಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರು ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ಬಂದಿದ್ದರೆ ಅಂಥವರಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಈ ಕಾಯ್ದೆ ಕಲ್ಪಿಸುತ್ತದೆ. ಆದರೆ, ಮುಸ್ಲಿಮರನ್ನು ಈ ಕಾಯ್ದೆಯಿಂದ ಹೊರಗಿಟ್ಟಿರುವುದು ತಪ್ಪು ಎಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.