ETV Bharat / bharat

ಭಾರತದಾದ್ಯಂತ ಮೊಹರಂ ಮೆರವಣಿಗೆಗೆ ಅವಕಾಶ ನೀಡಲು ಸುಪ್ರೀಂ ನಕಾರ

author img

By

Published : Aug 27, 2020, 5:38 PM IST

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ಪೀಠವು ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ನಿರಾಕರಿಸಿದೆ. ಇಡೀ ರಾಷ್ಟ್ರಕ್ಕೆ ಒಂದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​

ನವದೆಹಲಿ: ಕೋವಿಡ್​-19 ಹಿನ್ನೆಲೆ ಆ.29 ರಂದು ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅವಕಾಶ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಶಿಯಾ ಸಮುದಾಯವೂ ಮೊಹರಂ ದಿನ ಮೆರವಣಿಗೆ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು, ಮೆರವಣಿಗೆಯಲ್ಲಿ ಕೇವಲ ಐದು ಜನರು ಭಾಗವಹಿಸಲು ಅನುಮತಿ ನೀಡಿದೆ.

ಕಳೆದ ವಿಚಾರಣೆಯಲ್ಲಿ ಸಿಜೆಐಗೆ ಅರ್ಜಿದಾರರು ಮನವಿಯಲ್ಲಿ ರಾಜ್ಯಗಳನ್ನು ಸೇರಿಸುವಂತೆ ಕೇಳಿಕೊಂಡಿದ್ದರು. ಆಗ ಸಿಜೆಐ ರಾಜ್ಯಗಳ ಅಭಿಪ್ರಾಯವನ್ನು ಕೇಳದೇ ನ್ಯಾಯಾಲಯವು ಆದೇಶಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಇಂದು ವಿಚಾರಣೆ ನಡೆಸಿದ ಸಿಜೆಐ ಬೊಬ್ಡೆ ಅವರು ಜಗನ್ನಾಥ ಪುರಿಯ ಸಂದರ್ಭದಲ್ಲಿ ಅರ್ಜಿದಾರರು ಒಂದು ನಿರ್ದಿಷ್ಟ ಸ್ಥಳಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಮೊಹರಂ ವಿಷಯದಲ್ಲಿ ಅರ್ಜಿದಾರರು ಇಡೀ ದೇಶಾದ್ಯಂತ ಅನುಮತಿ ನೀಡುವಂತೆ ಕೋರಿದ್ದಾರೆ. ಹಾಗಾಗಿ ಇದರಲ್ಲಿ ತೊಂದರೆಗಳಿವೆ, ರಾಜ್ಯಗಳ ಅಭಿಪ್ರಾಯ ಕೇಳದೇ ನಿರ್ಣಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅದೇ ಒಂದು ನಿರ್ದಿಷ್ಟ ಸ್ಥಳಕ್ಕೆ ಆದರೆ ಆದೇಶ ನೀಡಬಹುದಿತ್ತು ಎಂದು ಸಿಜೆಐ ಬೊಬ್ಡೆ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.