ETV Bharat / bharat

ಮಹಾರಾಷ್ಟ್ರದ ಮುಂದಿನ ಸಿಎಂ ಉದ್ಧವ್​ ಠಾಕ್ರೆ: ಇದೇ ತಿಂಗಳ 28ರಂದು ಪ್ರಮಾಣ ವಚನ ಸ್ವೀಕಾರ

author img

By

Published : Nov 26, 2019, 8:32 PM IST

Updated : Nov 26, 2019, 11:15 PM IST

Uddhav Thackeray
ಮುಂದಿನ ಸಿಎಂ ಆಗಿ ಉದ್ಧವ್​ ಠಾಕ್ರೆ

ಮಹಾರಾಷ್ಟ್ರದಲ್ಲಿ ಕೊನೆಗೂ ಶಿವಸೇನೆ+ಎನ್​ಸಿಪಿ ಹಾಗೂ ಕಾಂಗ್ರೆಸ್​ ಮೈತ್ರಿಗೆ ಮೇಲುಗೈ ಆಗಿದ್ದು, ನೂತನ ಮುಖ್ಯಮಂತ್ರಿಯಾಗಿ ಉದ್ಧವ್​ ಠಾಕ್ರೆ ಆಯ್ಕೆಯಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜಕೀಯ ಹಗ್ಗಜಗ್ಗಾಟಕ್ಕೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದ್ದು, ನಾಲ್ಕು ದಿನಗಳ ಹಿಂದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ದೇವೇಂದ್ರ ಫಡ್ನವೀಸ್​ ರಾಜೀನಾಮೆ ನೀಡುವ ಮೂಲಕ ಮೈತ್ರಿ ಪಕ್ಷಗಳಾದ ಎನ್​ಸಿಪಿ+ಶಿವಸೇನೆ ಹಾಗೂ ಕಾಂಗ್ರೆಸ್​ ಪಕ್ಷಕ್ಕೆ ಮೇಲುಗೈ ಆಗಿದೆ.

ಇದೀಗ ಎನ್​ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್​ ಶಾಸಕರು ತಂಗಿರುವ ಹೋಟೆಲ್​ನಲ್ಲಿ ಉದ್ಧವ್​ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. ಖಾಸಗಿ ಹೋಟೆಲ್​​ನಲ್ಲಿ ಸಭೆ ಸೇರಿದ್ದ ವೇಳೆ ಮೂರೂ ಪಕ್ಷದ ಶಾಸಕರು ಉದ್ಧವ್ ಠಾಕ್ರೆ ಹೆಸರು ಫೈನಲ್​ ಮಾಡಿದ್ದು, ಅವರು ಮುಂದಿನ ಐದು ವರ್ಷಗಳ ಕಾಲ ಸಿಎಂ ಆಗಿ ಆಡಳಿತ ನೀಡಲಿದ್ದಾರೆ ಎಂದು ಎನ್​ಸಿಪಿ ಮುಖಂಡ ಜಯಂತ್​​ ಪಟೇಲ್​ ಹೇಳಿದ್ದಾರೆ. ಇದೀಗ ರಾಜ್ಯಪಾಲರ ಭೇಟಿ ಮಾಡಲಿರುವ ಮುಖಂಡರು, ಹೊಸದಾಗಿ ಸರ್ಕಾರ ರಚನೆ ಮಾಡಲು ನಿಲುವಳಿ ಮಂಡಿಸುವ ಸಾಧ್ಯತೆ ಇದೆ.
  • Shiv Sena chief and CM candidate of 'Maha Vikas Aghadi', Uddhav Thackeray: I had never dreamed of leading the state. I would like to thank Sonia Gandhi and others. We are giving a new direction to country by keeping faith on each other. #Maharashtra pic.twitter.com/EIJFzUVfnt

    — ANI (@ANI) November 26, 2019 " class="align-text-top noRightClick twitterSection" data=" ">

ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲ ಕೊಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್​, ಎನ್​ಸಿಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನಾಳೆ ವಿಶ್ವಾಸಮತ ಯಾಚಿಸುವಂತೆ ಕೋರ್ಟ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಸರ್ಕಾರಕ್ಕೆ​​ ಸೂಚಿಸಿತ್ತು. ಈ ಮೂಲಕ ಪ್ರತಿಪಕ್ಷಗಳಿಗೆ ಜಯ ದೊರೆತಂತಾಗಿದೆ.

ನಾಳೆ ಮಹಾರಾಷ್ಟ್ರದಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು, ನೂತನವಾಗಿ ಆಯ್ಕೆಗೊಂಡಿರುವ ಎಲ್ಲಾ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಡಿಸೆಂಬರ್​ 1ರಂದು ಉದ್ಧವ್​ ಠಾಕ್ರೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಇದೀಗ ಲಭ್ಯವಾದ ಮಾಹಿತಿ ಪ್ರಕಾರ ಇದೇ ತಿಂಗಳ 28ರಂದು ಅವರು ಸಿಎಂ ಗಾದಿ ಅಲಂಕಾರ ಮಾಡಲಿದ್ದಾರೆ.

Intro:Body:

ಮಹಾರಾಷ್ಟ್ರದ ಮುಂದಿನ ಸಿಎಂ ಆಗಿ ಉದ್ಧವ್​ ಠಾಕ್ರೆ... ಅಧಿಕೃತವಾಗಿ ಹೊರಬಿದ್ದ ಘೋಷಣೆ



ಮುಂಬೈ: ಮಹಾರಾಷ್ಟ್ರ ರಾಜಕೀಯ ಹಗ್ಗಜಗ್ಗಾಟಕ್ಕೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ದೇವೇಂದ್ರ ಫಡ್ನವೀಸ್​ ರಾಜೀನಾಮೆ ನೀಡುವ ಮೂಲಕ ಮೈತ್ರಿ ಪಕ್ಷಗಳಾದ ಎನ್​ಸಿಪಿ+ಶಿವಸೇನೆ ಹಾಗೂ ಕಾಂಗ್ರೆಸ್​ ಪಕ್ಷಕ್ಕೆ ಮೆಲುಗೈ ಸಿಕ್ಕಿದೆ.





 ಇದೀಗ ಎನ್​ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್​ ಶಾಸಕರು ತಂಗಿರುವ ಹೋಟೆಲ್​ನಲ್ಲಿ ಉದ್ಧವ್​ ಠಾಕ್ರೆ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. ಖಾಸಗಿ ಹೋಟೆಲ್​​ನಲ್ಲಿ ಸಭೆ ಸೇರಿದ್ದ ವೇಳೆ ಮೂರು ಪಕ್ಷದ ಶಾಸಕರು ಉದ್ಧವ್ ಠಾಕ್ರೆ ಹೆಸರು ಫೈನಲ್​ ಮಾಡಿದ್ದು, ಅವರು ಮುಂದಿನ ಐದು ವರ್ಷಗಳ ಕಾಲ ಸಿಎಂ ಆಗಿ ಆಡಳಿತ ನೀಡಲಿದ್ದಾರೆ ಎಂದು ಎನ್​ಸಿಪಿ ಮುಖಂಡ ಜಯಂತ್​​ ಪಟೇಲ್​ ಹೇಳಿದ್ದಾರೆ. ಇದೀಗ ರಾಜ್ಯಪಾಲರ ಭೇಟಿ ಮಾಡಲಿರುವ ಮುಖಂಡರು ಹೊಸದಾಗಿ ಸರ್ಕಾರ ರಚನೆ ಮಾಡಲು ನಿಲುವಳಿ ಮಂಡಿಸುವ ಸಾಧ್ಯತೆ ಇದೆ.



ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲ ಕೊಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್​, ಎನ್​ಸಿಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನಾಳೆ ವಿಶ್ವಾಸಮತ ಯಾಚಿಸುವಂತೆ ಕೋರ್ಟ್ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಸರ್ಕಾರಕ್ಕೆ​​ ಸೂಚಿಸಿದೆ. ಈ ಮೂಲಕ ಪ್ರತಿಪಕ್ಷಗಳಿಗೆ ಜಯ ದೊರೆತಂತಾಗಿದೆ.



ನಾಳೆ ಮಹಾರಾಷ್ಟ್ರದಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಡಿಸೆಂಬರ್​ 1ರಂದು ಉದ್ಧವ್​ ಠಾಕ್ರೆ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಸಾಧ್ಯತೆ ಇದೆ. 


Conclusion:
Last Updated :Nov 26, 2019, 11:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.