ETV Bharat / bharat

ಕ್ವಾರಂಟೈನ್ ಕೇಂದ್ರದಲ್ಲಿ ಮಹಿಳೆ ಜೊತೆ ಗಾರ್ಡ್ ಅನುಚಿತ ವರ್ತನೆ: ಕ್ರಮಕ್ಕಾಗಿ ಗ್ರಾಮಸ್ಥರ ಗಲಾಟೆ

author img

By

Published : Jul 11, 2020, 11:25 AM IST

ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆಯೊಂದಿಗೆ ಸೆಂಟರ್​ನ ಗಾರ್ಡ್ ಒಬ್ಬ ದೈಹಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗಲಾಟೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

quarantine
quarantine

ಪಥರ್ಪ್ರತಿಮಾ (ಪಶ್ಚಿಮ ಬಂಗಾಳ): ಇಲ್ಲಿನ ದಕ್ಷಿಣ 24 ಪರಗಣ ಜಿಲ್ಲೆಯ ಕ್ವಾರಂಟೈನ್ ಕೇಂದ್ರದ ಬಳಿ ಗ್ರಾಮಸ್ಥರು ಪೊಲೀಸರೊಂದಿಗೆ ಜಗಳವಾಡಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆಯೊಂದಿಗೆ ಸೆಂಟರ್​ನ ಗಾರ್ಡ್ ಒಬ್ಬ ದೈಹಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗಲಾಟೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರತಿಭಟನಾಕಾರರಿಂದ ಕೆಲ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿದೆ.

ದಿಗಂಬರಪುರ ಕರ್ಮತಿರ್ಥ ಕ್ವಾರಂಟೈನ್ ಕೇಂದ್ರದಲ್ಲಿ ಕಾವಲು ಕಾಯುತ್ತಿದ್ದ ಗ್ರಾಮ ಪೊಲೀಸ್ ಸದಸ್ಯನನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಆರೋಪಿಯನ್ನು ರಾತ್ರಿ ಹೊತ್ತಿನಲ್ಲಿ ಕ್ವಾರಂಟೈನ್ ಕೇಂದ್ರದ ಒಳಗೆ ಗಮನಿಸಿದ ಜನರು ಇತರರಿಗೆ ಮಾಹಿತಿ ನೀಡಿ ಸಿಬ್ಬಂದಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.