ETV Bharat / bharat

'ಭಾರತ ರತ್ನ' ಪ್ರಶಸ್ತಿ ಬಗ್ಗೆ ಟ್ವಿಟರ್‌ನಲ್ಲಿ ಬಿಸಿಬಿಸಿ ಚರ್ಚೆ: ನಿಮ್ಮ ಪ್ರಕಾರ ಅರ್ಹ ವ್ಯಕ್ತಿ ಯಾರು? ತಿಳಿಸಿ..

author img

By

Published : Jan 6, 2021, 8:31 PM IST

ದೇಶದ ಪರಮೋಚ್ಛ ನಾಗರಿಕ ಪ್ರಶಸ್ತಿ 'ಭಾರತ ರತ್ನ'ವನ್ನು ಯಾರಿಗೆ ನೀಡಬೇಕು? ಎಂಬುದರ ಕುರಿತು ಟ್ವಿಟರ್​ನಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಹೀಗೆ ಚರ್ಚಿಸುವವರು ಅವರದೇ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ.

Bharat Ratna
Bharat Ratna

ನವದೆಹಲಿ: ಗಣರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'ವನ್ನು ಯಾರಿಗೆ ನೀಡಬೇಕು? ಎಂಬ ವಿಚಾರವಾಗಿ ಟ್ವಿಟರ್​ನಲ್ಲಿ ಭರ್ಜರಿ ಚರ್ಚೆಯಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ನಾಲ್ವರು ಗಣ್ಯರ ಹೆಸರು ಕೇಳಿ ಬರುತ್ತಿದೆ.

ಓದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಆದೇಶ ಹಿಂಪಡೆಯಿರಿ: ತಮಿಳುನಾಡಿಗೆ ಕೇಂದ್ರದ ಖಡಕ್ ಸೂಚನೆ

ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಖ್ಯಾತ ಉದ್ಯಮಿ ರತನ್​ ಟಾಟಾ ಹಾಗೂ ಮಾಜಿ ಪ್ರಧಾನಿ ಹಾಗು ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಹೆಸರುಗಳು​ ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ. ಇದರ ಜತೆಗೆ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೆಸರೂ ಇದೆ.

Bharat Ratna
ಮಾಯಾವತಿ, ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ

ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ.

ಪ್ರಸಕ್ತ ಸಾಲಿನ ಭಾರತ ರತ್ನ ಇದೇ ತಿಂಗಳ ಘೋಷಣೆಯಾಗುವ ಸಾಧ್ಯತೆ ಇದೆ. ಕಳೆದ ವರ್ಷ ಪ್ರಣಬ್​ ಮುಖರ್ಜಿ, ಭೂಪೇನ್‌ ಹಜಾರಿಕಾ, ನಾನಾಜಿ ದೇಶಮುಖ್ ಅವರಿಗೆ ಈ ಪ್ರಶಸ್ತಿ ಘೋಷಣೆಯಾಗಿತ್ತು.

ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುಚ್ಛ ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.