ETV Bharat / bharat

ಕೊರೊನಾ ಮಹಾಮಾರಿಗೆ ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ​​ ಬಲಿ

author img

By

Published : Apr 30, 2021, 4:29 PM IST

Updated : Apr 30, 2021, 4:37 PM IST

ಡೆಡ್ಲಿ ವೈರಸ್ ಕೊರೊನಾ ಸೋಂಕು ಪ್ರತಿದಿನ ಸಾವಿರಾರು ಜನರ ಪ್ರಾಣ ಬಲಿ ಪಡೆದುಕೊಳ್ಳುತ್ತಿದ್ದು, ಇದೀಗ ಬಿಹಾರದ ಮುಖ್ಯ ಕಾರ್ಯದರ್ಶಿ ಸಹ ಸಾವನ್ನಪ್ಪಿದ್ದಾರೆ.

chief secretary Arun Kumar Singh
chief secretary Arun Kumar Singh

ಪಟ್ನಾ: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಾವಳಿ ತಾಂಡವವಾಡುತ್ತಿದ್ದು, ಇದಕ್ಕೆ ಪ್ರತಿದಿನ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ. ಇದೀಗ ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡ ಡೆಡ್ಲಿ ವೈರಸ್​​​ಗೆ ಬಲಿಯಾಗಿದ್ದಾರೆ.

ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್​ ಕುಮಾರ್​ ಸಿಂಗ್​ ಬಲಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅರುಣ್​ ಕುಮಾರ್​ ಸಿಂಗ್​ ಭಾರತೀಯ ನಾಗರಿಕ ಸೇವೆಯ 1985ರ ಬ್ಯಾಚ್​ನ ಅಧಿಕಾರಿಯಾಗಿದ್ದರು. ಫೆಬ್ರವರಿ 27,2021ರಂದು ಬಿಹಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

ಏಪ್ರಿಲ್​ 15ರಂದು ನಡೆಸಲಾಗಿದ್ದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ದೃಢಗೊಂಡಿತ್ತು. ಇದಾದ ಬಳಿಕ ಪಾಟ್ನಾದ ಪ್ಯಾರಾಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದರ ಜತೆಗೆ ಅವರು ಬ್ಲಡ್​ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಮೂಲತಃ ಪಶ್ಚಿಮ ಬಂಗಾಳದ ಚಂಪಾರನ್​ ಜಿಲ್ಲೆಯವರಾಗಿದ್ದ ಇವರು ಇದೇ ವರ್ಷ ಆಗಸ್ಟ್​ ತಿಂಗಳಲ್ಲಿ ನಿವೃತ್ತರಾಗಬೇಕಿತ್ತು.

ಇದನ್ನೂ ಓದಿ: 3ನೇ ಹಂತದ ಲಸಿಕಾ ಅಭಿಯಾನಕ್ಕೆ 2.45 ಕೋಟಿಗೂ ಅಧಿಕ ಮಂದಿ ನೋಂದಣಿ

ಅವರ ಸಾವಿಗೆ ಬಿಹಾರ ಸಚಿವ ಸಂಪುಟದಲ್ಲಿ ಎರಡು ನಿಮಿಷಗಳ ಮೌನ ಆಚರಣೆ ಮಾಡಲಾಗಿತ್ತು.ಎಲ್ಲರೂ ಸಂತಾಪ ಸೂಚಿಸಿದ್ದಾರೆ.

Last Updated : Apr 30, 2021, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.