ETV Bharat / bharat

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ.. ಕರ್ನಾಟಕದ್ದು ಯಾವಾಗ?

author img

By

Published : Jul 4, 2023, 3:26 PM IST

Updated : Jul 4, 2023, 6:43 PM IST

ತೆಲಂಗಾಣ, ಆಂಧ್ರ ಪ್ರದೇಶ ಸೇರಿ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

BJP appoints state president for Telangana, Andhra Pradesh, Jharkhand, Punjab
ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ

ನವದೆಹಲಿ: ಬಿಜೆಪಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಾಂಸ್ಥಿಕ ಪುನಶ್ಚೇತನಕ್ಕಾಗಿ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಪಕ್ಷದ ರಾಷ್ಟ್ರೀಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಬದಲಾವಣೆ ಊಹಾಪೋಹಗಳಿಗೆ ಮತ್ತಷ್ಟು ಪೃಷ್ಠಿ ನೀಡಿದೆ.

  • G Kishan Reddy has been appointed as BJP state president of Telangana, D Purandeshwari appointed as the state president of Andhra Pradesh BJP, former CM Babulal Marandi becomes the state president of Jharkhand, Sunil Jakhar - the party's state president of Punjab. pic.twitter.com/j4QSxZbFim

    — ANI (@ANI) July 4, 2023 " class="align-text-top noRightClick twitterSection" data=" ">

ಹಾಲಿ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ ಅವರನ್ನು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ನಾಯಕರಾದ ಎಟೆಲಾ ರಾಜೇಂದರ್ ಅವರನ್ನು ತೆಲಂಗಾಣ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜೇಂದರ್ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ತೊರೆದು ಬಿಜೆಪಿ ಸೇರಿದ್ದರು. ಹಾಲಿ ರಾಜ್ಯಾಧ್ಯಕ್ಷರಾದ ಬಂಡಿ ಸಂಜಯ್ ಕುಮಾರ್ ಅವರನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಸಂದರ್ಭದಲ್ಲಿ ಸಚಿವರಾಗಿ ನೇಮಕಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ದಿ.ಎನ್​ಟಿಆರ್​ ಅವರ ಪುತ್ರಿ, ಕೇಂದ್ರದ ಮಾಜಿ ಸಚಿವೆ ಕೆ. ಪುರಂದೇಶ್ವರಿ ಅವರನ್ನು ಆಂಧ್ರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಈ ಹಿಂದೆ ಪುರಂದೇಶ್ವರಿ ಅವರು ಕಾಂಗ್ರೆಸ್‌ನಲ್ಲಿದ್ದರು. ಡಾ.ಮನಮೋಹನ್​ ಸಿಂಗ್​ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಅಖಂಡ ಆಂಧ್ರ ಪ್ರದೇಶದ ಕೊನೆ ಮುಖ್ಯಮಂತ್ರಿಯಾದ ಕಿರಣ್ ಕುಮಾರ್ ರೆಡ್ಡಿ ಅವರಿಗೂ ಬಿಜೆಪಿ ಉನ್ನತ ಸ್ಥಾನ ನೀಡಿದೆ. ಕಾಂಗ್ರೆಸ್​ನಿಂದ ಬಿಜೆಪಿಗೆ ಸೇರಿದ್ದ ಕಿರಣ್ ಕುಮಾರ್ ರೆಡ್ಡಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸುನಿಲ್ ಜಾಖರ್ ಅವರನ್ನು ಪಂಜಾಬ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸುನಿಲ್ ಜಾಖರ್ ಸಹ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದರು. ಈ ಹಿಂದೆ ಕಾಂಗ್ರೆಸ್​ನಲ್ಲಿ ಪಂಜಾಬ್ ರಾಜ್ಯಾಧ್ಯಕ್ಷರಾಗಿ ಜಾಖರ್ ಕೆಲಸ ಮಾಡಿದ್ದರು. ಇನ್ನು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರನ್ನು ಜಾರ್ಖಂಡ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮತ್ತೊಂದೆಡೆ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತು ಬಳಿಕ ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂಬ ಕೂಗಿ ಕೇಳಿ ಬಂದಿದೆ. ಕರ್ನಾಟಕಕ್ಕೂ ಬಿಜೆಪಿ ಹೊಸ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಆಯ್ಕೆ ಸಹ ಆಗಬೇಕಿದೆ.

ಇದನ್ನೂ ಓದಿ: ರಾಜ್ಯಕ್ಕೆ ಬಾರದ ಹೈಕಮಾಂಡ್ ವೀಕ್ಷಕರು: ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆ

Last Updated : Jul 4, 2023, 6:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.