ETV Bharat / bharat

ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ರಷ್ಯಾ- ಉಕ್ರೇನ್ ಯುದ್ಧಕ್ಕೆ ಹೋಲಿಸಿದ ಬಿಜೆಪಿ

author img

By

Published : Jun 15, 2023, 9:30 AM IST

Agnimitra Paul
ಅಗ್ನಿಮಿತ್ರ ಪಾಲ್

West bengal violence: ಜುಲೈ 8 ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುತ್ತಿದ್ದು, ಕೆಲ ಪ್ರದೇಶಗಳಲ್ಲಿ ಬಾಂಬ್​ ದಾಳಿ ಸೇರಿದಂತೆ ಹಿಂಸಾಚಾರ ಭುಗಿಲೆದ್ದಿದೆ. ಈ ಕುರಿತಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಗ್ನಿಮಿತ್ರ ಪಾಲ್ ಅವರು ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಗ್ನಿಮಿತ್ರ ಪಾಲ್ ಬುಧವಾರ ತೃಣಮೂಲ ಕಾಂಗ್ರೆಸ್ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೂಡಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

  • #WATCH | West Bengal panchayat elections | "The violence is increasing as time is progressing. Besides this, there are issues cropping up in the filing of nominations, everywhere in West Bengal. So, we went to the Chief Minister to meet her today but we could not meet due to her… pic.twitter.com/ngF4wZJ0SV

    — ANI (@ANI) June 14, 2023 " class="align-text-top noRightClick twitterSection" data=" ">

ಪಂಚಾಯತ್​ ಚುನಾವಣೆಗೆ ರಾಜ್ಯ ಸಜ್ಜಾಗುತ್ತಿದ್ದಂತೆಯೇ ಹಿಂಸಾಚಾರ ಉಲ್ಬಣಗೊಂಡಿದೆ. ಹೀಗಾಗಿ, ರಾಜ್ಯದ ಪರಿಸ್ಥಿತಿಯನ್ನು ರಷ್ಯಾ-ಉಕ್ರೇನ್ ಯುದ್ಧಕ್ಕೆ ಹೋಲಿಸಿದ ಅಗ್ನಿಮಿತ್ರ ಪಾಲ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಕಳುಹಿಸದಿದ್ದರೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ರಕ್ತಪಾತವಾಗುತ್ತದೆ ಎಂದು ಹೇಳಿದರು.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅಗ್ನಿಮಿತ್ರ ಪಾಲ್, " ನಾಮ ನಿರ್ದೇಶನಕ್ಕೆ ಕೇವಲ 5-6 ದಿನಗಳು ಮಾತ್ರ ಇವೆ. ಚುನಾವಣೆ ಕುರಿತಂತೆ ಬೇರೆ ಯಾವುದೇ ರಾಜಕೀಯ ಪಕ್ಷಗಳ ಜೊತೆ ಆಡಳಿತ ಪಕ್ಷ ಚರ್ಚೆ ಮಾಡಿಲ್ಲ. ಯಾರ ಸಲಹೆಯನ್ನು ಪಡೆಯದೆ ಚುನಾವಣೆ ಘೋಷಿಸಲಾಗಿದೆ. ಬಿಜೆಪಿ ಹಾಗೂ ಇತರ ಪಕ್ಷಗಳ ಕಾರ್ಯಕರ್ತರಿಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡದಿರುವುದನ್ನು ನೋಡುತ್ತಿದ್ದೇವೆ. ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಹಲವು ವಿರೋಧ ಪಕ್ಷದ ನಾಯಕರು ತಮ್ಮ ಮೇಲೆ ಸಹ ಹಲ್ಲೆ ನಡೆಸಿದ್ದಾರೆ" ಎಂದು ಆರೋಪಿಸಿದರು.

"ಡೈಮಂಡ್ ಹಾರ್ಬರ್, ಜಾಯ್‌ನಗರ, ಕ್ಯಾನಿಂಗ್, ಕಾಕದ್ವೀಪ್ ಮತ್ತು ಬರ್ಧಮಾನ್‌ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕಬ್ಬಿಣದ ರಾಡ್‌ಗಳಿಂದ ಥಳಿಸಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಹೇಳಿದ್ದಾರೆ. ಬಾಂಬ್‌ಗಳು ಸ್ಫೋಟಗೊಳ್ಳುತ್ತಿವೆ. ದೊಡ್ಡ ಪ್ರಮಾಣದಲ್ಲಿ ಮದ್ದುಗುಂಡುಗಳನ್ನು ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಅರಾಜಕತೆಯನ್ನು ಖಂಡಿಸಿ ತಕ್ಷಣವೇ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು" ಎಂದು ಆಗ್ರಹಿಸಿದರು.

ಇದನ್ನೂ ಓದಿ : 'ಸತ್ಯ ಹೊರಬರಲಿ..' : ಕಟಕ್‌ನಲ್ಲಿ ರೈಲು ದುರಂತದ ಗಾಯಾಳುಗಳನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಕೇಂದ್ರ ಪಡೆಗಳನ್ನು ಕಳುಹಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಅಗ್ನಿಮಿತ್ರ ಪೌಲ್, ಇಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲಾಗುತ್ತಿದೆ. ನಾವು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸೇರಿದವರು ಎಂಬುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ಹೊರಹಾಕಿದರು. ಈ ಮಧ್ಯೆ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ನಾಯಕ ಮತ್ತು ಭಂಗಾರ್ ಶಾಸಕ ನೌಶಾದ್ ಸಿದ್ದಿಕಿ ಕೂಡ ವಿರೋಧ ಪಕ್ಷದ ನಾಯಕರಿಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 9 ರಿಂದ ಅವಕಾಶ ನೀಡಿದ್ದು, ಅಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಇದನ್ನೂ ಓದಿ : ಬೆಟ್ಟಗಳಲ್ಲಿ ಅಶಾಂತಿ ಉಂಟುಮಾಡಲು ಅವಕಾಶ ನೀಡುವುದಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.