ETV Bharat / bharat

ಕೇಂದ್ರ ಸಚಿವ ನಾರಾಯಣ ರಾಣೆ ಬಂಗಲೆ ಕೆಡವಲು ಬಾಂಬೆ ಹೈಕೋರ್ಟ್​ ಆದೇಶ

author img

By

Published : Sep 20, 2022, 12:14 PM IST

Narayan Rane bungalow
Narayan Rane bungalow

ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆ ಕೆಡವಲು ಬಾಂಬೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿ, ಆದೇಶ ಹೊರಡಿಸಿದೆ.

ಮುಂಬೈ(ಮಹಾರಾಷ್ಟ್ರ): ಕೇಂದ್ರ ಸಚಿವ ನಾರಾಯಣ ರಾಣೆ ಅವರು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಬಂಗಲೆ ಕೆಡವಲು ಬಿಎಂಸಿಗೆ ಬಾಂಬೆ ಹೈಕೋರ್ಟ್​ ನಿರ್ದೇಶನ ನೀಡಿದ್ದು, 10 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ಹೊರಹಾಕಿದೆ.

ಮುಂಬೈ ಜುಹುದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆ ಅಕ್ರಮವಾಗಿ ನಿರ್ಮಾಣಗೊಂಡಿದ್ದು, ಅದನ್ನು ಕೆಡವಲು ಹೈಕೋರ್ಟ್​ ಆದೇಶಿಸಿದೆ ಎಂದು ಅರ್ಜಿದಾರರ ಪರ ವಕೀಲ ಆದಿತ್ಯ ಪ್ರತಾಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಾರ್ಚ್​​ ವೇಳೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ: ಕೇಂದ್ರ ಸಚಿವ ನಾರಾಯಣ ರಾಣೆ

ಬೃಹತ್​ ಮುಂಬೈ ಮುನ್ಸಿಪಲ್​ ಕಾರ್ಪೋರೇಷನ್​​(ಬಿಎಂಸಿ) ಈ ಹಿಂದೆ ಕೇಂದ್ರ ಸಚಿವರಿಗೆ ಬಂಗಲೆ ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಇದೀಗ ಮಹತ್ವದ ಆದೇಶ ಹೊರಬಿದ್ದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ನಾರಾಯಣ ರಾಣೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.