ETV Bharat / bharat

ಕಂದಕಕ್ಕೆ ಉರುಳಿ ಬಿದ್ದ ಕಾರು: ಐವರು ಪ್ರಯಾಣಿಕರ ದುರ್ಮರಣ, ಓರ್ವ ಗಾಯ

author img

By

Published : Jun 10, 2022, 1:19 PM IST

ಕಾರೊಂದು ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ನೈನಿತಾಲ್​​ನಲ್ಲಿ ನಡೆದಿದೆ.

Car falls into gorge in Nainital
Car falls into gorge in Nainital

ನೈನಿತಾಲ್​​(ಉತ್ತರಾಖಂಡ): ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ಉತ್ತರಾಖಂಡದ ನೈನಿತಾಲ್​​​​​ನಲ್ಲಿ ನಡೆದಿದೆ. ಗಾಯಗೊಂಡಿರುವ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: ಕಾಂಗ್ರೆಸ್​ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ

ಗುರುವಾರ ರಾತ್ರಿ ಓಖಲ್ಕಂಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ತೆರಳುತ್ತಿದ್ದ ಕಾರು ಹಲ್ದ್ವಾನಿಯಿಂದ ಗುರುದ್ವಾರ ರೀತಾ ಸಾಹಿಬ್‌ಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಭಟ್ ತಿಳಿಸಿದ್ದಾರೆ.

ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.