ETV Bharat / bharat

Big News: ಪಿಎಫ್​ಐಗೆ ಕೇಂದ್ರದ ಅಂಕುಶ.. ಸಂಘಟನೆ ನಿಷೇಧಿಸಿ ಮಹತ್ವದ ಆದೇಶ

author img

By

Published : Sep 28, 2022, 7:10 AM IST

Updated : Sep 28, 2022, 9:07 AM IST

Central Government declares PFI ban  PFI ನಿಷೇಧ ಘೋಷಿಸಿದ ಕೇಂದ್ರ ಸರ್ಕಾರ
5 ವರ್ಷಗಳ ಕಾಲ PFI ನಿಷೇಧ ಘೋಷಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು 5 ವರ್ಷಗಳ ಕಾಲ PFI ಸಂಘಟನೆಯನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ.

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳಿಗೆ ಅಂಕುಶ ಹಾಕಿದೆ. ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹೌದು, ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ(ಪಿಎಫ್​ಐ) ಸಂಘಟನೆಗೆ ಕೇಂದ್ರ ಸರ್ಕಾರ ಅಂಕುಶ ಹಾಕಿದೆ. ಐದು ವರ್ಷಗಳ ಕಾಲ ಪಿಎಫ್​ಐ ಬ್ಯಾನ್​ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಮುಂದಿನ ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ.

ಸರ್ಕಾರದ ಅಧಿಸೂಚನೆಯಲ್ಲೇನಿದೆ.. PFI ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಕೆಲಸಗಳಲ್ಲಿ ತೊಡಗಿಸಿಕೊಂಡಿವೆ. ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಚಟುವಟಿಕೆಗಳು ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ದೇಶದಲ್ಲಿ ಉಗ್ರತ್ವವನ್ನು ಬೆಂಬಲಿಸುವ ಕೆಲಸವನ್ನು ಮಾಡುತ್ತಿವೆ. ಸಮಾಜದ ಒಂದು ವಿಭಾಗವು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಮತ್ತು ದೇಶದ ಸಾಂವಿಧಾನಿಕ ಅಧಿಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.

ಪಿಎಫ್​ಐನ ಅಂಗ ಸಂಸ್ಥೆಗಳಿಗೂ ಶಾಕ್​.. PFIನ ಕೆಲವು ಸಂಸ್ಥಾಪಕ ಸದಸ್ಯರು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ನಾಯಕರು ಮತ್ತು PFI ಜಮಾತ್-ಉಲ್-ಮುಜಾಹಿದ್ದೀನ್​ ಬಾಂಗ್ಲಾದೇಶ (JMB) ನೊಂದಿಗೆ ಸಂಪರ್ಕವನ್ನು ಹೊಂದಿದೆ. ಇವೆರಡೂ ನಿಷೇಧಿತ ಸಂಘಟನೆಗಳಾಗಿವೆ ಎಂದು ಕೇಂದ್ರವು ತನ್ನ ಅಧಿಸೂಚನೆಯಲ್ಲಿ ಹೇಳಿದೆ.

ಜಾಗತಿಕವಾಗಿ PFI ಅಂತಾರಾಷ್ಟ್ರೀಯ ಸಂಪರ್ಕಗಳ ಹಲವಾರು ನಿದರ್ಶನಗಳಿವೆ. ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ. ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಕೇಂದ್ರ ಸರ್ಕಾರ ಮೇಲಿನ ಸಂದರ್ಭಗಳನ್ನು ಪರಿಗಣಿಸಿ PFI ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾನೂನುಬಾಹಿರ ಸಂಘವೆಂದು ಘೋಷಿಸುವುದು ಅವಶ್ಯಕ ಎಂದು ಈ ನಿರ್ಧಾರವನ್ನು ಕೈಗೊಂಡಿದೆ. ಅದರ ಪ್ರಕಾರ ಸದರಿ ಅಧಿನಿಯಮದ ಸೆಕ್ಷನ್ 3 ರ ಉಪ-ವಿಭಾಗ (3) ಕ್ಕೆ ನಿಬಂಧನೆಯಿಂದ ನೀಡಲಾದ ಅಧಿಕಾರಗಳನ್ನು ಚಲಾಯಿಸುವಾಗ ಈ ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ಈ ಮೂಲಕ ನಿರ್ದೇಶಿಸುತ್ತದೆ. ಸದರಿ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಬಹುದಾದ ಯಾವುದೇ ಆದೇಶಕ್ಕೆ ಒಳಪಟ್ಟಿರುತ್ತದೆ. ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅನ್ವಯಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸರಣಿ ದಾಳಿ ನಂತರ ಆದೇಶ.. ಪಿಎಫ್​ಐ ಸಂಘಟನೆ ಮೇಲೆ ಇತ್ತೀಚೆಗೆ ಕೇಂದ್ರೀಯ ತನಿಖಾ ಸಂಸ್ಥೆ (ಎನ್​ಐಎ) ದೇಶಾದ್ಯಂತ ದಾಳಿ ಮಾಡಿತ್ತು. ಈ ವೇಳೆ ನೂರಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಕರ್ನಾಟಕ ಸೇರಿದಂತೆ ದೇಶದ 93 ಸ್ಥಳಗಳಲ್ಲಿ ಎನ್​ಐಎ ಈ ಕಾರ್ಯಾಚರಣೆ ಕೈಗೊಂಡಿತ್ತು.

ಎನ್​ಐಎ ದಾಳಿ ಬೆನ್ನಲ್ಲೇ ಮಂಗಳವಾರ ಕರ್ನಾಟಕ, ಅಸ್ಸೋಂ, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ 80ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಮತ್ತು ಗಲಭೆ ಸೇರಿದಂತೆ ಪ್ರಚೋದನಕಾರಿ ಕೃತ್ಯದ ಆರೋಪದಡಿ ರಾಜ್ಯದಲ್ಲಿ ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆದಿರುವ ಬಗ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್​ಕುಮಾರ್ ಮಂಗಳವಾರ​ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದರು.

ಸಂಬಂಧಿತ ಸುದ್ದಿ.. 80 ಪಿಎಫ್​ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ: ಎಡಿಜಿಪಿ ಅಲೋಕ್​ ಕುಮಾರ್​

Last Updated :Sep 28, 2022, 9:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.