ETV Bharat / bharat

ಬಂಟರ ಸಂಘದ ಚಟುವಟಿಕೆಗಳಿಗೆ ಸರ್ಕಾರದಿಂದ ಅಗತ್ಯ ನೆರವು: ಪುಣೆಯಲ್ಲಿ ಸಿಎಂ ಬೊಮ್ಮಾಯಿ

author img

By

Published : Aug 14, 2022, 6:55 AM IST

ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ 4ನೇ ವಾರ್ಷಿಕೋತ್ಸವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ.ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.

fourth anniversary program of Kannada Bhavan
ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವ

ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ನಡುವೆ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇದೇ ವೇಳೆ ಬಂಟ ಸಮುದಾಯದ ಕೊಡುಗೆಗಳನ್ನು ಶ್ಲಾಘಿಸಿದ ಸಿಎಂ ಅಗತ್ಯ ನೆರವಿನ ಭರವಸೆಯನ್ನೂ ನೀಡಿದರು.

fourth anniversary program of Kannada Bhavan
ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವ

ಬಂಟರ ಸಂಘಕ್ಕೆ ಸರ್ಕಾರದ ನೆರವು: 21ನೇ ಶತಮಾನ ಜ್ಞಾನದ ಕಾಲ. ಮುಂದಿನ ಪೀಳಿಗೆ ಜ್ಞಾನ ಪಡೆಯಬೇಕು. ಜ್ಞಾನದಲ್ಲಿ ಬಂಟರು ಕಡಿಮೆ ಇಲ್ಲ. ನಿಮ್ಮ ಸಂಘದ ಚಟುವಟಿಕೆಗಳಿಗೆ ಸರ್ಕಾರದ ವತಿಯಿಂದ ಅಗತ್ಯ ಸಹಾಯವನ್ನು ಸಹಕಾರದಿಂದ ನೀಡಲಾಗುವುದು. ಪಂಡರಾಪುರಕ್ಕೆ ಈ ವರ್ಷ 5 ಕೋಟಿ ರೂ.ಗಳನ್ನು ನೀಡಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದರು.

ಬಂಟರ ಬಗ್ಗೆ ಸಿಎಂ ಮೆಚ್ಚುಗೆ: ಬಂಟರು ಎನ್ನುವ ಹೆಸರಿನಲ್ಲಿಯೇ ಶಕ್ತಿ ಇದೆ. ಬಂಟರಾಗಬೇಕಾದರೆ ಅವರಿಗೆ ಎಂಟೆದೆ ಇರಬೇಕು. ಅದು ನಿಮ್ಮ ರಕ್ತದ ಕಣಕಣದಲ್ಲಿದೆ. ವ್ಯಾಪಾರ-ವ್ಯವಹಾರ ಸಾಹಸಕ್ಕೆ ಕೈಹಾಕುವವರು ನೀವು. ವ್ಯಾಪಾರದ ಇಕೋ ಸಿಸ್ಟಮ್ ಸೃಷ್ಟಿಸುತ್ತೀರಿ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ... ಶಕ್ತಿಸೌಧದ ಮುಂದೆ ರಾರಾಜಿಸಿದ ರಾಷ್ಟ್ರಧ್ವಜ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.