ETV Bharat / bharat

ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ ಮಾಡಿದ ಸಿಎಂ ಜಗನ್

author img

By

Published : Apr 26, 2022, 8:55 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಆಯೋಜಿಸುತ್ತಿರುವ ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದ ಕಾರ್ಯಸೂಚಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಸಭೆ ನಡೆಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

CM Jagan meets AP HC Chief Justice PK Mishra
ವೈ.ಎಸ್. ಜಗನ್ ಮೋಹನ್ ರೆಡ್ಡಿ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಸೋಮವಾರ ಮೊದಲ ಬಾರಿಗೆ ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಭೇಟಿ ಮಾಡಿದರು. ರಾಜ್ಯ ಅತಿಥಿ ಗೃಹದಲ್ಲಿ ಇಬ್ಬರ ನಡುವಿನ ಮೊದಲ ಔಪಚಾರಿಕ ಸಭೆ ನಡೆಯಿತು. ಮೇ 30 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶದ ಕಾರ್ಯಸೂಚಿಯ ಕುರಿತು ಇಬ್ಬರೂ ಚರ್ಚಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜಗನ್ ಮೋಹನ್ ರೆಡ್ಡಿ ಮತ್ತು ಮುಖ್ಯ ನ್ಯಾಯಮೂರ್ತಿ ಮಿಶ್ರಾ ಅವರು ಸಮಾವೇಶದಲ್ಲಿ ರಾಜ್ಯದಿಂದ ವರದಿ ಮಾಡಬೇಕಾದ ವಿಷಯಗಳ ಕುರಿತು ಚರ್ಚಿಸಿದರು. ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ನ್ಯಾಯಾಂಗ, ಇ-ಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿ ಹಾಗೂ ಕಾನೂನು ನೆರವಿಗೆ ಮಾರ್ಗಸೂಚಿಗಳ ಕುರಿತು ಚರ್ಚಿಸಲಾಯಿತು. ಜಂಟಿ ಸಮಾವೇಶದಲ್ಲಿ ರಾಜ್ಯದ ಪರವಾಗಿ ಮಂಡಿಸಬೇಕಾದ ವಿಷಯಗಳು, ಎಂಬುದನ್ನೂ ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸಮೀರ್ ಶರ್ಮಾ, ಪ್ರಧಾನ ಕಾರ್ಯದರ್ಶಿ ಎಂ.ಟಿ ಕೃಷ್ಣಬಾಬು, ಹೈಕೋರ್ಟ್‌ನ ಹಿರಿಯ ಆಡಳಿತ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಎಂ ಬರ್ತಾರೆ ಎಂದು ಪ್ರಯಾಣಿಕರ ಕಾರನ್ನೇ ಒಯ್ದರು.. ಮಕ್ಕಳ ಸಮೇತ ಬಸ್​ ಸ್ಟಾಪ್​ಲ್ಲೇ ರಾತ್ರಿ ಕಳೆದ ಕುಟುಂಬ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.