ETV Bharat / bharat

ಹಣದುಬ್ಬರದಿಂದ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಹಿಮಾಚಲ ಪ್ರದೇಶ ಸಿಎಂ

author img

By

Published : Nov 2, 2021, 10:02 PM IST

ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನದು ಅತ್ಯಂತ ಕಡಿಮೆ ಅಂತರದ ಗೆಲುವು ಎಂದು ಜೈರಾಮ್ ಠಾಕೂರ್ ಹೇಳಿದ್ದು, ಕಾಂಗ್ರೆಸ್ ಈ ಗೆಲುವನ್ನು ಸಂಭ್ರಮಿಸಲು ಯೋಗ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

cm-jairam-said-that-the-defeat-in-the-by-election-was-due-to-inflation
ಹಣದುಬ್ಬರದಿಂದ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಹಿಮಾಚಲ ಪ್ರದೇಶ ಸಿಎಂ

ಶಿಮ್ಲಾ(ಹಿಮಾಚಲ ಪ್ರದೇಶ): ಆಡಳಿತಾರೂಢ ಬಿಜೆಪಿ ಪಕ್ಷ ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲನ್ನಪ್ಪಿದೆ. ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಬಿಜೆಪಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಆದರೆ ಹಣದುಬ್ಬರದ ಕಾರಣದಿಂದಾಗಿ ಬಿಜೆಪಿ ಸೋಲು ಅನುಭವಿಸಿದೆ ಎಂದು ಹೇಳಿಕೆ ನೀಡಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನದು ಅತ್ಯಂತ ಕಡಿಮೆ ಅಂತರದ ಗೆಲುವು ಎಂದು ಜೈರಾಮ್ ಠಾಕೂರ್ ಹೇಳಿದ್ದು, ಕಾಂಗ್ರೆಸ್ ಈ ಗೆಲುವನ್ನು ಸಂಭ್ರಮಿಸಲು ಯೋಗ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಹಣದುಬ್ಬರವು ಜಾಗತಿಕ ಸಮಸ್ಯೆಯಾಗಿದೆ. ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಅದರ ಪರಿಣಾಮ ಹೆಚ್ಚಿದೆ ಎಂದು ಜೈರಾಮ್ ಠಾಕೂರ್ ಹೇಳಿದ್ದಾರೆ. ಇದರ ಜೊತೆಗೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರನ್ನು ಸ್ಮರಿಸಿದ ಅವರು ವೀರಭದ್ರ ಸಿಂಗ್ ನಿಧನವನ್ನು ಕಾಂಗ್ರೆಸ್ ಮತಗಳನ್ನಾಗಿ ಪರಿವರ್ತನೆ ಮಾಡಿಕೊಂಡಿದೆ. ಉಪಚುನಾವಣೆ ಸೋಲಿಗೆ ಕಾರಣಗಳನ್ನು ವಿಶ್ಲೇಷಿಸಲಾಗುತ್ತದೆ. ಲೋಪ ಎಲ್ಲಿದೆ ಎಂಬುದನ್ನು ಪತ್ತೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಗೃಹ ಮಂತ್ರಿ ಅನಿಲ್ ದೇಶಮುಖ್ ನ.6ರವರೆಗೆ ಇಡಿ ಕಸ್ಟಡಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.