ಕೇಂದ್ರ ಸಚಿವ ಸ್ಥಾನದಿಂದ ಅಜಯ್ ಮಿಶ್ರಾ ವಜಾಗೊಳಿವಂತೆ ಆಗ್ರಹ.. ಕಾಂಗ್ರೆಸ್ ಮೌನ ಪ್ರತಿಭಟನೆ

author img

By

Published : Oct 11, 2021, 5:35 PM IST

Priyanka Gandhi

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕೆಂದರೆ ಕೇಂದ್ರ ಸಚಿವ ಸ್ಥಾನದಿಂದ ಅಜಯ್​ ಮಿಶ್ರಾ ಅವರನ್ನು ವಜಾಗೊಳಿಸಿ ಎಂದು ಕಾಂಗ್ರೆಸ್ ಆಗ್ರಹಿಸಿ ಮೌನ ಪ್ರತಿಭಟನೆ ನಡೆಸುತ್ತಿದೆ.

ಲಖನೌ(ಉತ್ತರಪ್ರದೇಶ): ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಮುಖಂಡರು ಜಿಪಿಒದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಜನರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಶನಿವಾರ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯ ಸಮ್ಮತ ತನಿಖೆ ದೃಷ್ಟಿಯಿಂದ ಸಚಿವಸ್ಥಾನದಿಂದ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ವಕ್ತಾರರು ಒತ್ತಾಯಿಸುತ್ತಿದ್ದಾರೆ.

ಯಾರ ಒತ್ತಡಕ್ಕೂ ನಾವು ಮಣಿಯುವುದಿಲ್ಲ.. ಆರೋಪಿಗಳ ವಿರುದ್ಧ ಕ್ರಮ

ಈ ಮಧ್ಯೆ, ಉತ್ತರಪ್ರದೇಶ ಸಚಿವ ಸಿದ್ಧಾರ್ಥ್ ಸಿಂಗ್​, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರ ಒತ್ತಡದಿಂದಲೂ ಪ್ರಭಾವಿತರಾಗುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿಗರ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಹೋರಾಟ ನಡೆಸುವುದು ಅವರ ಪ್ರಜಾಪ್ರಭುತ್ವದ ಹಕ್ಕು ಎಂದಿದ್ದಾರೆ.

ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ CJI ಅವರದು ಗಮನಾರ್ಹ ಮಧ್ಯಪ್ರವೇಶ : ದುಷ್ಯಂತ್​ ದವೆ ಶ್ಲಾಘನೆ

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ದಲಿತರು ಮತ್ತು ರೈತರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಕಾಂಗ್ರೆಸ್ಸಿಗರು ಅದರ ವಿರುದ್ಧ ಯಾಕೆ ಮೌನ ವ್ರತ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.