ಮೇಕೆದಾಟು ಪಾದಯಾತ್ರೆ ಎಫೆಕ್ಟ್​: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿಗೆ ಕೋವಿಡ್

author img

By

Published : Jan 13, 2022, 12:31 PM IST

Updated : Jan 13, 2022, 12:44 PM IST

Mallikarjun Kharge tested corona positive

ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕೋವಿಡ್​ ಸೋಂಕು ತಗುಲಿದೆ.

ನವದೆಹಲಿ: ಇತ್ತೀಚೆಗೆ ರಾಜ್ಯದಲ್ಲಿ ಕಾಂಗ್ರೆಸ್ ಆರಂಭಿಸಿರುವ ಮೇಕೆದಾಟು ಪಾದಯಾತ್ರೆಗೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಿರಿಯ ಮುಖಂಡ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ರೋಗಲಕ್ಷಣರಹಿತರಾಗಿದ್ದಾರೆ. ಸದ್ಯ ಹೋಮ್​ ಐಸೋಲೇಷನ್​ಗೆ ಒಳಗಾಗಿದ್ದಾರೆ. ಕೋಡ್​ ಲಸಿಕೆಯ ಎರಡೂ ಡೋಸ್​ ಪಡೆದಿದ್ದು, ಬೂಸ್ಟರ್ ಡೋಸ್‌ಗೆ ಇನ್ನೂ ಅರ್ಹರಾಗಿರಲಿಲ್ಲ ಎಂದು ಖರ್ಗೆ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

  • This evening I tested positive for COVID-19. While I am having symptoms (cough & fever), I’m grateful to be fully vaccinated, which is protecting me from more severe illness.
    I am under home quarantine & request everyone who have recently come in my contact to get tested.

    — Dr. M. Veerappa Moily (@moilyv) January 12, 2022 " class="align-text-top noRightClick twitterSection" data=" ">

ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಸಂಜೆ ಅವರಿಗೆ ಕೋವಿಡ್​ ಪಾಸಿಟಿವ್​ ವರದಿ ಬಂದಿದ್ದು, ಅವರಿಗೆ ಕೆಮ್ಮು ಮತ್ತು ಜ್ವರ ಇದೆ. ''ನಾನು ಕೋವಿಡ್​ ಲಸಿಕೆಯ ಎರಡೂ ಡೋಸ್​​ ಪಡೆದಿದ್ದರಿಂದ, ಭಾರಿ ಪರಿಣಾಮ ಎದುರಿಸುವುದನ್ನು ತಪ್ಪಿಸಿದಂತಾಗಿದೆ. ಸದ್ಯ ಹೋಮ್​ ಕ್ವಾರಂಟೈನ್​ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್​ ಟೆಸ್ಟ್ ಮಾಡಿಸಿಕೊಳ್ಳಿ'' ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ದೇಶ ವಿಭಜನೆಯ ವೇಳೆ ಬೇರ್ಪಟ್ಟ ಸಹೋದರರು.. 74 ವರ್ಷದ ಬಳಿಕ ಒಂದಾದ ಅಣ್ಣ - ತಮ್ಮ !

ಮಲ್ಲಿಕಾರ್ಜುನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆಯ ಉದ್ಘಾಟನಾ ವೇಳೆ ಭಾಗಿಯಾಗಿದ್ದರು.

Last Updated :Jan 13, 2022, 12:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.