ETV Bharat / bharat

ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ, ಖರ್ಗೆ ಖಂಡನೆ

author img

By

Published : Dec 17, 2021, 6:51 PM IST

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ್ದಾರೆ.

Congress leader priyanka gandhi, mallikarjuna kharge on Ramesh kumar statement
ಅತ್ಯಾಚಾರ ಕುರಿತ ಹೇಳಿಕೆಗೆ ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ, ಖರ್ಗೆ ಖಂಡನೆ

ನವದೆಹಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ನೀಡಿದ ಹೇಳಿಕೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ 'ರಮೇಶ್​ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಮೇಶ್​ಕುಮಾರ್ ಹೇಳಿರುವ ಪದಗಳನ್ನು ವಿವರಿಸಲು ಸಾಧ್ಯವಿಲ್ಲ. ಅವುಗಳನ್ನು ಸಮರ್ಥನೆ ಮಾಡಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಅತ್ಯಾಚಾರ ಘೋರ ಅಪರಾಧ. ಪೂರ್ಣ ವಿರಾಮ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • I wholeheartedly condemn the statement made earlier today by Sri. K.R.Ramesh Kumar. It is inexplicable how anyone can ever utter such words, they are indefensible. Rape is a heinous crime. Full stop.

    — Priyanka Gandhi Vadra (@priyankagandhi) December 17, 2021 " class="align-text-top noRightClick twitterSection" data=" ">

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಕೂಡಾ ರಮೇಶ್ ಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, 'ಅವರು ಈ ಮಾತು ಹೇಳಬಾರದಿತ್ತು. ಅವರು ಅನುಭವಿ ರಾಜಕಾರಣಿಯಾಗಿದ್ದು, 2 ಬಾರಿ ಸ್ಪೀಕರ್ ಆಗಿದ್ದರು. ಅವರು ಕ್ಷಮೆಯಾಚಿಸಿರುವುದರಿಂದ ವಿಷಯವನ್ನು ಎಳೆದು ತರುವುದು ಬೇಡ' ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಗೂ ತಲುಪಿದ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ; ಕೆಂಡ ಕಾರಿದ ಕೇಂದ್ರ ನಾಯಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.