ETV Bharat / bharat

ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ: ರಾಹುಲ್ ಗಾಂಧಿ

author img

By

Published : Jun 4, 2022, 8:32 PM IST

congress-leader-rahul-gandhi-tweet-about-textbook-revision-controversy-in-karnataka
ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ: ರಾಹುಲ್ ಗಾಂಧಿ ಟೀಕೆ

ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿ ನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಕರ್ನಾಟಕದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಷಯವಾಗಿ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ ಎಂದು ಟೀಕೆ ಮಾಡಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತಾಗಿ ಟ್ವೀಟ್​ ಮಾಡಿರುವ ರಾಹುಲ್​​ ಗಾಂಧಿ, ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್, ಬುದ್ಧ, ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ ಎಂದು ಟೀಕಿಸಿದ್ದಾರೆ.

  • ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.

    ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ.

    ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.

    — Rahul Gandhi (@RahulGandhi) June 4, 2022 " class="align-text-top noRightClick twitterSection" data=" ">

ಅಲ್ಲದೇ, ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ. ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿ ನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ ಎಂದು ರಾಗಾ ಟ್ವೀಟ್​ ಮಾಡಿದ್ದಾರೆ.

  • ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ.

    Dr BR ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.

    — Rahul Gandhi (@RahulGandhi) June 4, 2022 " class="align-text-top noRightClick twitterSection" data=" ">

ಮುಂದುವರೆದು, ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಅವರು ಟ್ವೀಟ್​​ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ದಲಿತ, ಮಹಿಳಾ, ಸಾಮಾಜಿಕ ನ್ಯಾಯ, ಸಮಾನತೆ ವಿರೋಧಿ ಕ್ರಮ: ಬರಗೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.