ETV Bharat / bharat

ಉತ್ತರಾಖಂಡದಲ್ಲಿ ಬಿಜೆಪಿ ನಾಯಕ 'ಕೈ' ಹಿಡಿಯುವ ಸಾಧ್ಯತೆ: ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ ಎಂದ ದಿನೇಶ್ ಗುಂಡೂರಾವ್

author img

By

Published : Jan 18, 2022, 6:56 AM IST

ಗೋವಾದಲ್ಲಿ ಸ್ಥಿರ ಸರ್ಕಾರ ರಚಿಸಲು ಕಾಂಗ್ರೆಸ್ ಸಿದ್ಧವಾಗಿದೆ. ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ದುರ್ಬಲವಾಗಿದೆ. ನಾವು ಅವರೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Congress Screening Committee meets amid reports of Harak Singh joining and goa elections
Congreಉತ್ತರಾಖಂಡದಲ್ಲಿ ಬಿಜೆಪಿ ನಾಯಕ 'ಕೈ' ಹಿಡಿಯುವ ಸಾಧ್ಯತೆ: ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ ಎಂದ ದಿನೇಶ್ ಗುಂಡೂರಾವ್ ss Screening Committee meets amid reports of Harak Singh joining and goa elections

ನವದೆಹಲಿ: ಪಂಚರಾಜ್ಯಗಳ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇದೆ. ಚುನಾವಣಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷಗಳು ಕಸರತ್ತು ನಡೆಸುತ್ತಿವೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳನ್ನು ಕೆಲವು ಪಕ್ಷಗಳು ಬಿಡುಗಡೆ ಮಾಡಿವೆ.

ಉತ್ತರಾಖಂಡದಲ್ಲಿಯೂ ಚುನಾವಣಾ ಕಣ ರಂಗೇರಿದೆ. ಮಾಜಿ ಸಚಿವ ಹರಕ್ ಸಿಂಗ್ ರಾವತ್ ಬಿಜೆಪಿಯಿಂದ ಹೊರನಡೆದು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಮಾತುಕತೆಗಳೂ ತೀವ್ರಗೊಂಡಿವೆ ಎನ್ನಲಾಗುತ್ತಿದೆ. ಈವರೆಗೆ ಹರಕ್​ಸಿಂಗ್ ರಾವತ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಪಕ್ಷ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಬೆನ್ನಲ್ಲೆ ಉತ್ತರಾಖಂಡ್​​ನ ಕಾಂಗ್ರೆಸ್​​​ ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಿದ್ದು, ಅಭ್ಯರ್ಥಿಗಳ ಹೆಸರುಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉತ್ತರಾಖಂಡ್​ನ ಎಲ್ಲ 70 ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಜನವರಿ 19ರಂದು ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಉತ್ತರಾಖಂಡ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಣೇಶ್ ಗೋಡಿಯಾಲ್ ಪ್ರತಿಕ್ರಿಯೆ ನೀಡಿ, ಸ್ಕ್ರೀನಿಂಗ್ ಸಮಿತಿಯು ತನ್ನ ಕೆಲಸವನ್ನು ಮಾಡಿದೆ. ಕೇಂದ್ರ ಚುನಾವಣಾ ಸಮಿತಿಗೆ ಹೆಸರುಗಳನ್ನು ಕಳುಹಿಸಲಾಗಿದೆ. ಹರಕ್ ಸಿಂಗ್ ರಾವತ್ ವಿಚಾರದಲ್ಲಿ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಸಾಮೂಹಿಕವಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ತಪ್ಪುಗಳನ್ನು ಒಪ್ಪಿಕೊಂಡರೆ ಬರಬಹುದು: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾವು ಎಲ್ಲವನ್ನೂ ವಿವರವಾಗಿ ಚರ್ಚಿಸುತ್ತಿದ್ದೇವೆ. ಚುನಾವಣೆಯಲ್ಲಿ ಗೆಲ್ಲಲು ನಾವು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಹರಕ್ ಸಿಂಗ್ ರಾವತ್ ಕುರಿತು ಮಾತನಾಡಿರುವ ಹರೀಶ್ ರಾವತ್ ರಾಜಕೀಯದಲ್ಲಿ ಅವರು ತೆಗೆದುಕೊಂಡ ಕೆಲವು ನಿರ್ಧಾರಗಳು ತಪ್ಪಾಗಿವೆ. ಅವರು ಪಕ್ಷ ಸೇರುವ ಬಗ್ಗೆ ನನಗೆ ತಿಳಿದಿಲ್ಲ. ಈ ವಿಚಾರವನ್ನು ನನ್ನೊಂದಿಗೆ ಚರ್ಚಿಸಿಲ್ಲ. ಅವರು ತಪ್ಪುಗಳನ್ನು ಒಪ್ಪಿಕೊಂಡರೆ, ಪಕ್ಷಕ್ಕೆ ಬರಬಹುದು. ಈ ವಿಷಯ ನನಗೆ ಸಂಬಂಧಿಸಿಲ್ಲ. ಪಕ್ಷ ಏನೇ ನಿರ್ಧಾರ ತೆಗೆದುಕೊಂಡರೂ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ದೇವೇಂದ್ರ ಯಾದವ್ ಅವರಿಗೆ ಕೊರೊನಾ ಸೋಂಕು ಇದ್ದ ಕಾರಣದಿಂದ ಸಭೆಗೆ ಹಾಜರಾಗಿರಲಿಲ್ಲ. ಇದೇ ಕಾರಣದಿಂದ ಸ್ಕ್ರೀನಿಂಗ್ ಸಭೆಯಲ್ಲಿ ಹರಕ್ ಸಿಂಗ್ ರಾವತ್ ಬಗ್ಗೆ ಚರ್ಚೆ ನಡೆದರೂ, ತೀರ್ಮಾನ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಇನ್ನೆರಡು ದಿನಗಳಲ್ಲಿ ಗೋವಾದಲ್ಲಿ ಮತ್ತೊಂದು 'ಕೈ' ಪಟ್ಟಿ

ಗೋವಾಕ್ಕೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಸಭೆ ನಡೆಸಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಇನ್ನೆರಡು ದಿನಗಳಲ್ಲಿ ಮತ್ತೊಂದು ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಗೋವಾದದಲ್ಲಿ ಒಟ್ಟು 40 ಕ್ಷೇತ್ರಗಳ ಪೈಕಿ, 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಕಾಂಗ್ರೆಸ್ ಅಂತಿಮಗೊಳಿಸಿ, ಪಟ್ಟಿ ಬಿಡುಗಡೆ ಮಾಡಿದೆ.

ಗೋವಾದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಹವಣಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲ ಪಕ್ಷಗಳು, ಕಠಿಣ ಸ್ಪರ್ಧೆಯನ್ನು ಎದುರಿಸಲಿವೆ. ಆಮ್ ಆದ್ಮಿ ಮತ್ತು ಟಿಎಂಸಿ ಪಕ್ಷಗಳೂ ಕಣದಲ್ಲಿವೆ.

ಟಿಎಂಸಿಯೊಂದಿಗೆ ಮೈತ್ರಿ ಇಲ್ಲ ಎಂದ ದಿನೇಶ್ ಗುಂಡೂರಾವ್​

ಗೋವಾಗೆ ಕಾಂಗ್ರೆಸ್​ ಉಸ್ತುವಾರಿಯಾದ ದಿನೇಶ್ ಗುಂಡೂರಾವ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೋವಾದಲ್ಲಿ ಸ್ಥಿರ ಸರ್ಕಾರ ರಚಿಸಲು ಕಾಂಗ್ರೆಸ್ ಸಿದ್ಧವಾಗಿದೆ. ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ದುರ್ಬಲವಾಗಿದೆ. ನಾವು ಅವರೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮತ್ತೊಂದೆಡೆ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಆಮ್​ ಆದ್ಮಿ ಪಕ್ಷ ಬಿಜೆಪಿಯೇತರ ಪಕ್ಷಗಳನ್ನು ದುರ್ಬಲಗೊಳಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: 'ಭಾರತದಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯ': ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ಮೋದಿ ಭಾಷಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.