ETV Bharat / bharat

ದೇಶದಲ್ಲಿ ಹೊಸದಾಗಿ 2.7 ಲಕ್ಷ ಕೋವಿಡ್‌ ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳು 225 ದಿನಗಳಲ್ಲೇ ಹೆಚ್ಚು

author img

By

Published : Jan 16, 2022, 9:49 AM IST

India Covid Report
India Covid Report

ಭಾರತದಲ್ಲಿ ಇಂದು 2,71,202 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,71,202 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 1,38,331ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟು 15,50,377 ಸಕ್ರಿಯ ಪ್ರಕರಣಗಳು ಇವೆ. ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 16.28ರಷ್ಟಿದೆ.

ಕಳೆದ 24 ಗಂಟೆಯಲ್ಲಿ 314 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4,48,549 ಮಂದಿ ಮೃತಪಟ್ಟಿದ್ದಾರೆ. ಇನ್ನು ಇಂದು 7,743 ಒಮಿಕ್ರಾನ್ ಕೇಸ್​ಗಳು ದೃಢಪಟ್ಟಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.