ETV Bharat / bharat

ದೇಶದಲ್ಲಿ 6 ಸಾವಿರ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಸೋಂಕಿತರು ಇಳಿಕೆ

author img

By

Published : Sep 4, 2022, 10:39 AM IST

ಭಾರತದಲ್ಲಿ ಇಂದು ಮುಂಜಾನೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಕೋವಿಡ್‌ ವರದಿ ಹೀಗಿದೆ.

Etv Bhatoday-india-caovid-reportrat
ಹೊಸ ಕೋವಿಡ್​ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,809 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಧಿಯಲ್ಲಿ ಕೇರಳದಲ್ಲಿ ಐವರು ಸೇರಿದಂತೆ ದೇಶದಲ್ಲಿ ಒಟ್ಟು 26 ಸೊಂಕಿತರು ಸಾವನ್ನಪ್ಪಿದ್ದಾರೆ. ಈಗಿನ ದೈನಂದಿನ ಪಾಸಿಟಿವಿಟಿ ದರ ಶೇ.0.12 ರಷ್ಟಿದೆ. ಚೇತರಿಕೆ ಪ್ರಮಾಣ ಶೇ.98.69 ಇದೆ. ಸಕ್ರಿಯ ಸೋಂಕಿತರ ಸಂಖ್ಯೆ ದೇಶವ್ಯಾಪಿ ಇಳಿಕೆಯಾಗುತ್ತಿದೆ.

ನಿನ್ನೆ 8,414 ಕೋವಿಡ್​ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ ಇದುವರೆಗೆ 213.01 ಕೋಟಿ ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಕೋವಿಶೀಲ್ಡ್​ ಲಸಿಕೆಯಿಂದ ಮಗಳ ಸಾವು.. ₹1000 ಕೋಟಿ ಪರಿಹಾರ ಕೋರಿ ಬಾಂಬೆ ಕೋರ್ಟ್​ ಮೆಟ್ಟಿಲೇರಿದ ತಂದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.