ETV Bharat / bharat

ರೈಲಿನಲ್ಲಿ ಆರ್‌ಪಿಎಫ್ ಕಾನ್ಸ್​​ಟೇಬಲ್​​​​​ನಿಂದ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

author img

By

Published : Jul 29, 2023, 8:29 PM IST

crime-railway-security-guard-tried-to-molest-girl-in-ranchi-patna-train
ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್​ನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಆರ್‌ಪಿಎಫ್ ಕಾನ್ಸ್​ಟೇಬಲ್​​ ​ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ರಾಂಚಿ(ಜಾರ್ಖಂಡ್): ಪಾಟ್ನಾ- ಹತಿಯಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್ಸ್​​ಟೇಬಲ್​ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜು.26ರಂದು ಪಾಟ್ನಾದಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ ಪಾಟ್ನಾ- ಹತಿಯಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ರಾಂಚಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ರೈಲು ಕೊಡೆರ್ಮಾ ನಿಲ್ದಾಣಕ್ಕೆ ತಲುಪಿದಾಗ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ತಮ್ಮ ಸೀಟಿನಲ್ಲಿ ಮಲಗಿದ್ದರು. ಈ ವೇಳೆ ಮಹಿಳೆ ಎಚ್ಚರಗೊಂಡು ನೋಡೊದಾಗ ರೈಫಲ್ ಹಿಡಿದ ಆರ್‌ಪಿಎಫ್​ನ ಭದ್ರತಾ ಸಿಬ್ಬಂದಿಯೊಬ್ಬ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ತಕ್ಷಣ ಮಹಿಳೆ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಬೋಗಿಯಲ್ಲಿದ್ದ ಸಹ ಪ್ರಯಾಣಿಕರು ಆರೋಪಿ ಭದ್ರತಾ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ವಿಷಯದ ಗಂಭೀರತೆ ಅರಿತು ಅಲ್ಲಿಗೆ ಆಗಮಿಸಿದ ಇತರ ಭದ್ರತಾ ಸಿಬ್ಬಂದಿ ಆರೋಪಿಯನ್ನು ಸ್ಥಳದಿಂದ ಕರೆದೊಯ್ದಿದ್ದಾರೆ. ಮರುದಿನ ಬೆಳಿಗ್ಗೆ ರಾಂಚಿ ತಲುಪಿದ ಮಹಿಳೆ, ಆರೋಪಿ ಆರ್‌ಪಿಎಫ್​ನ ಭದ್ರತಾ ಸಿಬ್ಬಂದಿಯ ವಿರುದ್ಧ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ರಾಂಚಿಯ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಘಟನೆ ನಡೆದಿದ್ದ ಕೊಡೆರ್ಮಾ ರೈಲ್ವೆ ಪೊಲೀಸ್​ ಠಾಣೆಗೆ ವರ್ಗಾಯಿಸಲಾಗಿದೆ. ಜುಲೈ 27 ರಂದು ಮಹಿಳೆಯೊಬ್ಬರು ಆರ್‌ಪಿಎಫ್ ಕಾನ್ಸ್​ಟೇಬಲ್​​ ವಿರುದ್ಧ ದೂರು ನೀಡಲು ಬಂದಿದ್ದರು, ತಕ್ಷಣವೇ ಅವರ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂದು ರಾಂಚಿ ಜಿಆರ್‌ಪಿ ಪೊಲೀಸ್ ಠಾಣಾಧಿಕಾರಿ ರೂಪೇಶ್ ಕುಮಾರ್ ಹೇಳಿದ್ದಾರೆ.

ತನ್ನ ಹಾಗೂ ತನ್ನ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಸಿ ಬೋಗಿಯ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದೆ, ಆದರೆ ಎಸಿ ಬೋಗಿಯಲ್ಲೂ ಇಂತಹ ಘಟನೆಗಳು ನಡೆದರೆ ಜನರು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಎಂದು ಮಹಿಳೆ ಪ್ರಶ್ನಿಸಿದ್ದಾರೆ. ಈ ಘಟನೆಯು ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಮತ್ತು ಯುವತಿಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳವನ್ನು ಉಂಟುಮಾಡಿದೆ. ಸದ್ಯ ಪ್ರಕರಣದ ತನಿಖೆಯನ್ನು ಕೊಡೆರ್ಮಾ ರೈಲ್ವೆ ಪೊಲೀಸರು ನಡೆಸುತ್ತಿದ್ದಾರೆ. "ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿ ಆರೋಪಿ ಕಾನ್ಸ್​​​​ಟೇಬಲ್​​ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ" ಎಂದು ಕೊಡೆರ್ಮಾ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕಿಯ ಮೇಲೆ ಕಾಮುಕರ ಅಟ್ಟಹಾಸ: ದೆಹಲಿಯ ನಿರ್ಭಯಾ ಪ್ರಕರಣ ನೆನಪಿಸುವಂತಿದೆ ಈ ಗ್ಯಾಂಗ್​ ರೇಪ್

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮತ್ತೊಂದೆಡೆ, ಬಿಹಾರದಲ್ಲಿ ಮಗನ ಜನ್ಮದಿನದ ಪಾರ್ಟಿಯ ವೇಳೆ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಮಗನ ಬರ್ತ್‌ಡೇ ಪಾರ್ಟಿ ವೇಳೆ ಆರೋಪಿ ತಂದೆ ಕುಡಿದು ಬಂದು ಈ ದುಷ್ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಸೋದರ ಮಾವ ಹಿಲ್ಸಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.