ETV Bharat / bharat

ಅತ್ಯಾಚಾರ ಸಂತ್ರಸ್ತೆಯ ಪೋಷಕರ ಫೋಟೋ ಹಂಚಿಕೊಂಡ ಆರೋಪ ; ರಾಹುಲ್‌ ಗಾಂಧಿ ಟ್ವೀಟ್‌ ಅಳಿಸಿದ ಟ್ವಿಟರ್‌

author img

By

Published : Aug 7, 2021, 5:16 PM IST

ತಮ್ಮ ಮಗಳಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಸಂತ್ರಸ್ತೆಯ ಪೋಷಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ ಅವರು, ಮೃತಳ ಪೋಷಕರಿಗೆ ಸಾಂತ್ವನ ಹೇಳಿದ್ದರು. ನ್ಯಾಯ ಸಿಗುವವರೆಗೆ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದ್ದರು. ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು..

dalit girls death rahuls tweet with pic of victims kin no longer available on website
ಅತ್ಯಾಚಾರ ಸಂತ್ರಸ್ತೆಯ ಪೋಷಕರ ಫೋಟೋ ಹಂಚಿಕೊಂಡ ಆರೋಪ; ರಾಹುಲ್‌ ಗಾಂಧಿ ಟ್ವೀಟ್‌ ಅಳಿಸಿಹಾಕಿದ ಟ್ವಿಟ್ಟರ್‌

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿವಾದಾತ್ಮಕ ಟ್ವೀಟ್‌ ಅನ್ನು ಟ್ವಿಟರ್‌ ಇಂಡಿಯಾ ಅಳಿಸಿ ಹಾಕಿದೆ. ದೆಹಲಿಯಲ್ಲಿ ಹತ್ಯೆಗೀಡಾದ 9 ವರ್ಷದ ದಲಿತ ಬಾಲಕಿಯ ಪೋಷಕರನ್ನು ಭೇಟಿಯಾಗಿದ್ದ ಫೋಟೋವನ್ನು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇದು ವಿವಾದಾತ್ಮಕ ಹಿನ್ನೆಲೆಯಲ್ಲಿ ಟ್ವೀಟ್‌ ಅನ್ನು ಡಿಲೀಟ್‌ ಮಾಡಲಾಗಿದೆ.

ಸಂತ್ರಸ್ತೆಯ ಪೋಷಕರ ಮುಖ ತೋರಿಸಿರುವುದರಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (NCPCR) ಟ್ವಿಟರ್ ಸಂಸ್ಥೆಗೆ ನೋಟಿಸ್ ನೀಡಿದೆ. ಟ್ವಿಟರ್ ಇಂಡಿಯಾ ಗ್ರಿವೆನ್ಸಸ್ ಅಧಿಕಾರಿಗೆ ಪತ್ರ ಬರೆದಿದ್ದು, ಇದು ಬಾಲಾಪರಾಧಿಗಳ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ರಾಹುಲ್ ಗಾಂಧಿ ಖಾತೆ ವಿರುದ್ಧ ಕ್ರಮಕ್ಕೆ ಸೂಚಿಸಿದೆ.

ಕಾಂಗ್ರೆಸ್‌ ನಾಯಕನ ಪೋಸ್ಟ್ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್ ಗಾಂಧಿಗೆ ನೋಟಿಫಿಕೇಷನ್‌ ಮೂಲಕ ತಿಳಿಸಲಾಗಿದೆ. ಆ ಬಳಿಕ ಟ್ವೀಟ್‌ ಅನ್ನು ಅಳಿಸಲಾಗಿದೆ. ಸಂತ್ರಸ್ತೆಯ ಪೋಷಕರು ತಮ್ಮ ಮಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ರಾಹುಲ್‌ ಗಾಂಧಿ ಮನೆ ಬಳಿ ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಹುಲ್‌ ಗಾಂಧಿ ಅವರು ಮೃತಳ ಪೋಷಕರಿಗೆ ಸಾಂತ್ವನ ಹೇಳಿದ್ದರು. ನ್ಯಾಯ ಸಿಗುವವರೆಗೆ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದ್ದರು. ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.