ETV Bharat / bharat

6-12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್​; 5-12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ

author img

By

Published : Apr 26, 2022, 3:03 PM IST

Covaxin for children
Covaxin for children

ದೇಶಾದ್ಯಂತ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹೊತ್ತಲ್ಲೇ ಚಿಕ್ಕ ಮಕ್ಕಳಿಗೂ ಕೋವಿಡ್ ವ್ಯಾಕ್ಸಿನ್​ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಏರಿಕೆ ಕಂಡು ಬಂದಿದೆ. ಇದರ ಮಧ್ಯೆ, ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡ್ರಗ್ಸ್ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ(ಡಿಸಿಜಿಐ) ಒಪ್ಪಿಗೆ ನೀಡಿದೆ. ಇನ್ನು ಮುಂದೆ, 6ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್​ ಹಾಗೂ 5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ​​ ನೀಡಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದು, ಮಾಹಿತಿ ಹಂಚಿಕೊಂಡಿದ್ದಾರೆ.

  • भारत की कोविड से लड़ाई अब और अधिक मज़बूत @CDSCO_INDIA_INF ने

    >6 से <12 आयुवर्ग के लिए 'Covaxin'

    >5 से <12 आयुवर्ग के लिए 'Corbevax'

    12 से ऊपर के आयुवर्ग के लिए 'ZyCoV-D' की 2 डोज को

    'Restricted Use in Emergency Situations' की मंज़ूरी दी है।

    — Dr Mansukh Mandaviya (@mansukhmandviya) April 26, 2022 " class="align-text-top noRightClick twitterSection" data=" ">

ಕಳೆದ ಡಿಸೆಂಬರ್​ ತಿಂಗಳಲ್ಲಿ ಡಿಸಿಜಿಐ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ತುರ್ತು ಅನುಮತಿಸಿತ್ತು. ಇದೀಗ 5 ರಿಂದ 12 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಬಹುದು. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ 2021ರ ಜನವರಿ 16ರಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭಿಸಿದೆ. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಈ ಲಸಿಕೆ ನೀಡಲಾಗಿತ್ತು. ತದನಂತರ ಮಾರ್ಚ್​ 1ರಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಾರಂಭವಾಗಿದೆ.

ಪುಟ್ಟ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಸಹ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​​ ಲಸಿಕೆಯನ್ನು ಮಕ್ಕಳಿಗೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.