ETV Bharat / bharat

ಅಕ್ರಮ ಹಣ ವರ್ಗಾವಣೆ ಕೇಸ್​: ದೆಹಲಿ ಕೋರ್ಟ್​ನಿಂದ ಡಿಕೆಶಿಗೆ ಸಮನ್ಸ್ ಜಾರಿ

author img

By

Published : May 31, 2022, 4:36 PM IST

Updated : May 31, 2022, 4:42 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ನಾಲ್ವರು ವಿರುದ್ಧ ಜಾರಿ ನಿರ್ದೇಶನಾಲಯ ಇಂದು ಸಮನ್ಸ್ ಜಾರಿ ಮಾಡಿದೆ.

summoned Congress leader DK Shivakumar
summoned Congress leader DK Shivakumar

ನವದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸ್​​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ದೆಹಲಿ ಕೋರ್ಟ್​ನಿಂದ ಸಮನ್ಸ್ ಜಾರಿಯಾಗಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ದಾಖಲಾಗಿರುವ ಬೆನ್ನಲ್ಲೇ ಈ ಸಮನ್ಸ್ ಜಾರಿ ಮಾಡಲಾಗಿದೆ.

2018ರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಇಂದು ಸಮನ್ಸ್ ನೀಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ದೆಹಲಿ ಕೋರ್ಟ್​ನ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶನ ನೀಡಿದ್ದಾರೆ.

ಡಿಕೆ ಶಿವಕುಮಾರ್ ಜೊತೆಗೆ ಸಚಿನ್‌ ನಾರಾಯಣ್‌, ಸುನೀಲ್‌ ಕುಮಾರ್‌ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಸಮನ್ಸ್‌ ನೀಡಲಾಗಿದೆ. ಜೂನ್‌ 1ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕಳೆದ ವಾರ ಡಿಕೆಶಿ ಮತ್ತು ಇತರ ನಾಲ್ವರು ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಟ್​ಶೀಟ್ ಸಲ್ಲಿಕೆ ಮಾಡಿದ್ದರು. ಇದೇ ವಿಚಾರವಾಗಿ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ 2019ರ ಸೆಪ್ಟೆಂಬರ್ ತಿಂಗಳಲ್ಲಿ ಡಿಕೆಶಿ ಬಂಧನವಾಗಿದ್ದರು. ಇದಾದ ಬಳಿಕ ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್​ನಿಂದ ಜಾಮೀನು ಪಡೆದು, ಹೊರಗೆ ಬಂದಿದ್ದರು.

ಇದನ್ನೂ ಓದಿ: ಸ್ಕೂಟಿ-ಬೈಕ್​ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸಾವು : ಸಿಸಿಟಿವಿಯಲ್ಲಿ ಭಯಾನಕ‌ ದೃಶ್ಯ

2019ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಡಿಕೆಶಿ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷಗಳ ಬಳಿಕ ಆರೋಪ ಪಟ್ಟಿ ತಯಾರಿಸಿ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೆಹಲಿ ವಿಶೇಷ ಕೋರ್ಟ್​ಗೆ ಸಲ್ಲಿಕೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. ಇಡಿ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಡಿಕೆಶಿ ನಿವಾಸದಲ್ಲಿ 8 ಕೋಟಿ ರೂ. ನಗದು ಪತ್ತೆಯಾಗಿತ್ತು.

Last Updated : May 31, 2022, 4:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.