ETV Bharat / bharat

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ

author img

By

Published : Apr 12, 2023, 7:23 PM IST

Updated : Apr 12, 2023, 7:32 PM IST

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಡಿಎಂಕೆ ಕೌನ್ನಿಲರ್​​​ನನ್ನು ಪೊಲೀಸರು ಬಂಧಿಸಿದ್ದಾರೆ.

dmk-councilor-arrested-for-sexually-assaulting-5-year-old-girl
5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಡಿಎಂಕೆ ಕೌನ್ಸಿಲರ್ ಬಂಧನ

ಕಡಲೂರು (ತಮಿಳುನಾಡು): ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಡಿಎಂಕೆ ಕೌನ್ಸಿಲರ್​ನನ್ನು ಪೊಲೀಸರು ಬಂಧಿಸಿದ್ದಾರೆ. ವೃದ್ಧಾಚಲಂ ಪುರಸಭೆಯ 30ನೇ ವಾರ್ಡ್​ ಕೌನ್ಸಿಲರ್​​ ಪಕ್ರಿಸ್ವಾಮಿಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನು, ಪಕ್ರಿಸ್ವಾಮಿ ವೃದ್ಧಾಚಲಂನಲ್ಲಿ ತನ್ನ ಸ್ವಂತ ನರ್ಸರಿ ಶಾಲೆ ನಡೆಸುತ್ತಿದ್ದರು. ಈ ಶಾಲೆಯಲ್ಲಿ ಓದುತ್ತಿದ್ದ 5 ವರ್ಷದ ಬಾಲಕಿಗೆ ಪಕ್ರಿಸ್ವಾಮಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

  • ஒழுங்கு நடவடிக்கை

    கடலூர் மேற்கு மாவட்டம், விருத்தாசலம் நகராட்சி 30வது வார்டு நகர்மன்ற உறுப்பினர் பக்கிரிசாமி, கழகக் கட்டுப்பாட்டை மீறியும், கழகத்திற்கு அவப்பெயர் ஏற்படுத்தும் வகையி்லும் செயல்பட்டதால், அடிப்படை உறுப்பினர் உள்ளிட்ட அனைத்து பொறுப்புகளிலிருந்தும் நிரந்தரமாக நீக்கி… pic.twitter.com/AT6SRP3nZh

    — DMK (@arivalayam) April 12, 2023 " class="align-text-top noRightClick twitterSection" data=" ">

ಪ್ರಕರಣ ಸಂಬಂಧ ಬಾಲಕಿಯ ಪೋಷಕರು ವೃದ್ಧಾಚಲಂನ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿ ಪಕ್ರಿಸ್ವಾಮಿಯನ್ನು ಬಂಧಿಸಿದ್ದಾರೆ. ಇನ್ನು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಭದ್ರಾಚಲಂ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಬಾಲಕಿಯನ್ನು ತಪಾಸಣೆ ನಡೆಸಿದ ವೈದ್ಯರು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೃಢಪಡಿಸಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಪಕ್ರಿಸಾಮಿ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 9 (ಎಫ್), (ಎಂ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ರಸ್ತೆ ಅಪಘಾತದಿಂದ ಉದ್ವಿಗ್ನ ಪರಿಸ್ಥಿತಿ: ಗಾಳಿಯಲ್ಲಿ ಗುಂಡು, ಪೊಲೀಸ್​ ವ್ಯಾನ್​ ಮೇಲೆ ದಾಳಿ

ಪೊಲೀಸರು ಪ್ರಕರಣದ ಬಗ್ಗೆ ಹೇಳಿದ್ದಿಷ್ಟು: ವಿರುಧಾಚಲಂನ ಪ್ರಾಥಮಿಕ ಶಾಲೆಯೊಂದರ ಆವರಣದಲ್ಲಿ ಯುಕೆಜಿ ಓದುತ್ತಿದ್ದ ಸಂತ್ರಸ್ತೆಗೆ ಕೌನ್ಸಿಲರ್ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿಯ ತಾಯಿ ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರು ಆಧರಿಸಿ ಪಕ್ರಿಸಾಮಿಯನ್ನು ಬಂಧಿಸಲಾಗಿದೆ. ಮಗುವನ್ನು ವಿರುಧಾಚಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಆಕಾಂಕ್ಷ ದುಬೆ ಆತ್ಮಹತ್ಯೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಕೋರ್ಟ್‌ಗೆ ಹಾಜರು

ಪಕ್ಷದಿಂದ ಉಚ್ಛಾಟನೆ ಮಾಡಿರುವುದಾಗಿ ಡಿಎಂಕೆ ಸ್ಪಷ್ಟನೆ: ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ದುರೈಮುರುಗನ್​​, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಪಕ್ರಿಸ್ವಾಮಿಯನ್ನು ಡಿಎಂಕೆ ಪಕ್ಷದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲೇ ಸ್ಪಷ್ಟನೆ ಕೊಟ್ಟ ಸಿಎಂ ಎಂ.ಕೆ. ಸ್ಟಾಲಿನ್​: ಇಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ‘ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಕ್ರಿಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ. ಡಿಎಂಕೆ ಪಕ್ಷದ ನಗರ ಸಭೆಯ ಸದಸ್ಯ ಎಂಬುದು ಗೊತ್ತಾದ ಕೂಡಲೇ ಅವರನ್ನು ಪಕ್ಷದಿಂದ ಶಾಶ್ವತವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ಬಿಆರ್​ಎಸ್​ ಪಾರ್ಟಿ ಕಾರ್ಯಕ್ರಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 2 ಸಾವು, 8 ಮಂದಿಗೆ ಗಾಯ
ಇದನ್ನು ಓದಿ: ಮದುವೆ ಸಂಭ್ರಮದಲ್ಲಿ ರಿವಾಲ್ವರ್‌ನಿಂದ ನಾಲ್ಕು ಸುತ್ತು ಗುಂಡು ಹಾರಿಸಿ ವಧು ಪರಾರಿ!

Last Updated :Apr 12, 2023, 7:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.