ETV Bharat / bharat

Army encounter: ರಜೌರಿಯಲ್ಲಿ 2ನೇ ದಿನಕ್ಕೆ ಕಾಲಿಟ್ಟ ಗುಂಡಿನ ಚಕಮಕಿ: ಓರ್ವ ಭಯೋತ್ಪಾದಕ ಹತ

author img

By

Published : Aug 6, 2023, 10:37 AM IST

Rajouri encounter: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್​ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಬೇಟೆಯಾಡಿದೆ.

Representative image
ಪ್ರಾತಿನಿಧಿಕ ಚಿತ್ರ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ಭಾನುವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಜನರು ತಮ್ಮ ಸುರಕ್ಷತೆಗಾಗಿ ಎರಡು ಕಿ.ಮೀ ದೂರದಲ್ಲಿ ಉಳಿಯಲು ಪೊಲೀಸರು ಸಲಹೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಬರಿಯಾಮಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಮೂಲಗಳ ಪ್ರಕಾರ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಭಾರತೀಯ ಸೇನೆಯ ಪ್ಯಾರಾ ಕಮಾಂಡೋಗಳು ಕೂಡ ಎನ್‌ಕೌಂಟರ್‌ನಲ್ಲಿ ತೊಡಗಿದ್ದಾರೆ. ಈ ಪ್ರದೇಶವನ್ನು ಭಾರತೀಯ ಸೇನೆ ಸುತ್ತುವರಿದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬುಧಾಲ್ ಪ್ರದೇಶದ ಗುಂಧಾ-ಖಾವಾಸ್ ಗ್ರಾಮದಲ್ಲಿ ಪೊಲೀಸರು ಮತ್ತು ಸೇನೆಯು ಆರಂಭಿಸಿದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳೊಂದಿಗಿನ ಆರಂಭಿಕ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಶನಿವಾರ ಸದೆಬಡಿದಿದೆ.

ಎರಡೂ ಕಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಬಲವರ್ಧನೆಯು ಭಯೋತ್ಪಾದಕರ ಎಲ್ಲಾ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಬಂದ್​ ಮಾಡಿದೆ. ಮತ್ತು ಅವರನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ನಂತರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಸುರಕ್ಷಿತ ಪ್ರದೇಶದಲ್ಲಿ ಉಳಿಯಲು ಸೂಚನೆ: ಆರಂಭದಲ್ಲಿ ಪೊಲೀಸ್ ತಂಡ ಕಾರ್ಯಾಚರಣೆ ಪ್ರಾರಂಭಿಸಿತು. ಬಳಿಕ ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ಕಾರ್ಯಾಚರಣೆ ಆರಂಭಿಸಿತು. ‌ಎನ್​ಕೌಂಟರ್ ನಡೆದ ಸ್ಥಳದಿಂದ ಹತನಾದ ಭಯೋತ್ಪಾದಕನ ದೇಹವನ್ನು ಇನ್ನೂ ವಶಕ್ಕೆ ಪಡೆಯಬೇಕಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು. ಇನ್ನು, ಯಾವುದೇ ಪ್ರಾಣಹಾನಿಯನ್ನು ತಪ್ಪಿಸಲು ಎನ್‌ಕೌಂಟರ್ ಸ್ಥಳದಿಂದ ದೂರವಿರಲು ರಜೌರಿ ಪೊಲೀಸರು ಭಾನುವಾರ ಜನರಲ್ಲಿ ಮನವಿ ಮಾಡಿದ್ದಾರೆ. ಗುಂಧಾ-ಖಾವಾಸ್ ಗ್ರಾಮದ ಸಾಮಾನ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿಯೊಂದಿಗೆ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಜನರು ಈ ಪ್ರದೇಶಕ್ಕೆ ಭೇಟಿ ನೀಡದಂತೆ ಮತ್ತು ಪರಿಧಿಯ ಹೊರಗೆ ಕನಿಷ್ಠ ಎರಡು ಕಿ.ಮೀ. ಸುರಕ್ಷಿತ ಪ್ರದೇಶದಲ್ಲಿ ಉಳಿಯಲು ಸೂಚಿಸಲಾಗಿದೆ.

ಮೂವರು ಯೋಧರಿಗೆ ಗಾಯ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ(ಆ.4) ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಪ್ರತ್ಯೇಕತಾವಾದಿ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ರಾಷ್ಟ್ರೀಯ ರೈಫಲ್ಸ್​ನ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕುಲ್ಗಾಮ್ ಜಿಲ್ಲೆಯ ಹಾಲನ್ ಗ್ರಾಮದಲ್ಲಿ ಘರ್ಷಣೆ ನಡೆದಿತ್ತು. ಉಗ್ರರ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದರು. ನಂತರ ಭದ್ರತಾ ಸಿಬ್ಬಂದಿ ಕೂಡ ಪ್ರತಿ ದಾಳಿ ನಡೆಸಿದ್ದರು.

ಇದನ್ನೂ ಓದಿ: ದಕ್ಷಿಣ ಕಾಶ್ಮೀರದಲ್ಲಿ ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ: ಮೂವರು ಯೋಧರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.