‘goodbye' ರಾಜಕೀಯಕ್ಕೆ ದಿಢೀರ್​​ ನಿವೃತ್ತಿ ಘೋಷಿಸಿದ BJP MP ಬಾಬುಲ್ ಸುಪ್ರಿಯೋ​!

author img

By

Published : Jul 31, 2021, 5:49 PM IST

Babul Supriyo
Babul Supriyo ()

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್​ ಸುಪ್ರಿಯೋ ರಾಜಕೀಯದಿಂದ ದಿಢೀರ್​ ನಿವೃತ್ತಿ ಪಡೆದುಕೊಂಡಿದ್ದು, ಇದರ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಸೇವೆ ಸಲಿಸಿದ್ದ ಸಂಸದ ಬಾಬುಲ್​ ಸುಪ್ರಿಯೋ ದಿಢೀರ್​ ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Babul Supriyo
ರಾಜಕೀಯಕ್ಕೆ ದಿಢೀರ್​ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ

ಕಳೆದ ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆಯಾಗಿದ್ದ ಸಂದರ್ಭದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಸುಪ್ರಿಯೋ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಕೀಯದಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಫೇಸ್​ಬುಕ್​​ನಲ್ಲಿ ಮಾಹಿತಿ ಶೇರ್​​ ಮಾಡಿಕೊಂಡಿರುವ ಸುಪ್ರಿಯೋ, Goodbye.ನಾನು ಯಾವುದೇ ಪಕ್ಷ ಸೇರಿಕೊಳ್ಳುತ್ತಿಲ್ಲ. ಟಿಎಂಸಿ, ಕಾಂಗ್ರೆಸ್​​, ಸಿಪಿಐ(ಎಂ) ನನಗೆ ಫೋನ್​ ಮಾಡಿಲ್ಲ. ಜೊತೆಗೆ ನಾನು ಎಲ್ಲಿಗೂ ಹೋಗುತ್ತಿಲ್ಲ. ಸಾಮಾಜಿಕ ಕೆಲಸ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.

ಸುಪ್ರಿಯೊ ಇತ್ತೀಚೆಗೆ ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೋಲ್ಕತ್ತಾದ ಟೋಲಿಗಂಜ್ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದಾದ ಬಳಿಕ ಸಕ್ರೀಯ ರಾಜಕೀಯದಿಂದ ಗಾಯಕ - ರಾಜಕಾರಣಿ ಸುಪ್ರಿಯೊ ಕಾಣೆಯಾಗಿದ್ದರು. ಇದೀಗ ದಿಢೀರ್​ ನಿವೃತ್ತಿ ಪಡೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.