ETV Bharat / bharat

ನಿದ್ದೆಯಲ್ಲಿದ್ದಾಗ ಕುಸಿದ ಮನೆ: ಐವರು ಸಾವು, ಆರು ಮಂದಿ ಸ್ಥಿತಿ ಗಂಭೀರ

author img

By

Published : Oct 22, 2021, 3:13 PM IST

ತಡರಾತ್ರಿ ದಿಢೀರ್​ ಆಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

house collapse in UP
house collapse in UP

ಜೌನ್​ಪುರ (ಉತ್ತರಪ್ರದೇಶ): ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್​ಪುರದಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಯ ಕುಟುಂಬಸ್ಥರು ನಿದ್ರೆ ಮಾಡ್ತಿದ್ದ ವೇಳೆ ಏಕಾಏಕಿ ಕಟ್ಟಡ ಕುಸಿತ ಕಂಡಿರುವ ಪರಿಣಾಮ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ಕೆಲವರನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಮನೀಷ್ ಕುಮಾರ್​ ವರ್ಮಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್​ ಸೈನಿ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಇದನ್ನೂ ಓದಿರಿ: ಮುಂಬೈನ 64 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ: 19 ಅಂತಸ್ತಿನಿಂದ ಕೆಳಗೆ ಬಿದ್ದ ವ್ಯಕ್ತಿ

ಘಟನೆಯಲ್ಲಿ ಮೃತರಾದವರನ್ನ ಅಜೀಮುಲ್ಲಾ, ಮೊಹಮ್ಮದ್ ಕೈಫ್, ಸಂಜೀದಾ, ಮಿಸ್ವಾ ಮತ್ತು ಮೊಹಮ್ಮದ್ ಸೈಫ್ ಎಂದು ಗುರುತಿಸಲಾಗಿದೆ. ಉಳಿದಂತೆ ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.