ETV Bharat / bharat

ಗುಡಿಸಲಿಗೆ ಬೆಂಕಿ: ಸುಖ ನಿದ್ರೆಯಲ್ಲಿದ್ದ ಮೂವರು ಮಕ್ಕಳು, ದಂಪತಿ ದಾರುಣ ಸಾವು

author img

By

Published : Mar 12, 2023, 11:02 AM IST

ಉತ್ತರ ಪ್ರದೇಶದ ರೂರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಕಿ
fire

ಉತ್ತರ ಪ್ರದೇಶ: ಕಾನ್ಪುರದ ದೇಹತ್‌ ಎಂಬಲ್ಲಿ ಇಂದು ಮುಂಜಾವು ಭೀಕರ ಅಗ್ನಿ ಅನಾಹುತ ಸಂಭವಿಸಿತು. ಗುಡಿಸಲೊಂದಕ್ಕೆ ಹೊತ್ತಿಕೊಂಡ ಬೆಂಕಿ ಮೂವರು ಮಕ್ಕಳು ಸೇರಿದಂತೆ ಐವರನ್ನು ಬಲಿ ಪಡೆದಿದೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜರಡೇರ ಗ್ರಾಮದಲ್ಲಿ ಘಟನೆ ನಡೆದಿದೆ.

ವಿವರ: ಹರ್ಮೌ ಬಂಜರಡೇರ ಹಳ್ಳಿಯ ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಮೂವರು ಮಕ್ಕಳು ಮಲಗಿದ್ದಾಗ ಇದ್ದಕ್ಕಿದ್ದಂತೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಆದ್ರೆ, ಅಷ್ಟೊತ್ತಿಗಾಗಲೇ ಒಂದೇ ಕುಟುಂಬ ಐವರ ಪ್ರಾಣಪಕ್ಷಿ ಹಾರಿಹೋಗಿತ್ತು. ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ನಿಂದ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ: ದಂಪತಿ ಸಜೀವ ದಹನ

ಬೆಂಕಿ ನಂದಿಸಲು ಯತ್ನಿಸಿದ ಸತೀಶ್ ಅವರ ತಾಯಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ವಿಧಿವಿಜ್ಞಾನ ತಂಡ ಮತ್ತು ಶ್ವಾನದಳ ಸಹ ಆಗಮಿಸಿ, ಅಗ್ನಿ ದುರಂತಕ್ಕೆ ಕಾರಣ ಕಂಡುಹಿಡಿಯುತ್ತಿದ್ದಾರೆ.

ಇದನ್ನೂ ಓದಿ : ಬಿಎಂಟಿಸಿ ಬಸ್​ನಲ್ಲಿ ಬೆಂಕಿ: ನಿದ್ರಿಸುತ್ತಿದ್ದ ನಿರ್ವಾಹಕ ಸಜೀವ ದಹನ

"ಸತೀಶ್ ಮತ್ತು ಅವರ ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಹುಲ್ಲಿನ ಛಾವಣಿ ಮೇಲಿದ್ದ ಬಲ್ಬ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಬಳಿಕ ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಗುಡಿಸಲಿಗೆ ವ್ಯಾಪಿಸಿತು" ಎಂದು ಸ್ಥಳೀಯ ನಿವಾಸಿಯೊಬ್ಬರು ಮಾಹಿತಿ ನೀಡಿದರು.

ಸಿಎಂ ಯೋಗಿ ಆದಿತ್ಯನಾಥ್ ಸಂತಾಪ: ಘಟನೆ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅರಣ್ಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ನೂರಾರು ಎಕರೆ ವನ್ಯಸಂಪತ್ತು ನಾಶ

ಬೆಂಗಳೂರಿನಲ್ಲಿ ನಡೆದ ಘಟನೆ: ಕಳೆದ ಎರಡು ದಿನಗಳ ಹಿಂದಷ್ಟೇ (ಮಾರ್ಚ್​ 10 ರಂದು) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿತ್ತು. ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿತ್ತು. ಅಗ್ನಿ ದುರಂತದಿಂದಾಗಿ ಬಸ್ ಒಳಗಡೆ ಮಲಗಿದ್ದ ನಿರ್ವಾಹಕ ಮುತ್ತಯ್ಯ (45) ಸಜೀವ ದಹನವಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಜಪ್ತಿಯಾದ ವಾಹನಗಳು ಅಗ್ನಿಗಾಹುತಿ

ಹೊತ್ತಿ ಉರಿದ ಗುಜರಿ ಗೋದಾಮು..: ಇನ್ನೊಂದೆಡೆ, ಅದೇ ದಿನದಂದು ನಾಯಂಡಳ್ಳಿ ಸಮೀಪದ ಪ್ರಮೋದ ಲೇಔಟ್​ನಲ್ಲಿರುವ ಗುಜರಿ ಗೋದಾಮು ಹೊತ್ತಿ ಉರಿದಿತ್ತು. ಪ್ಲಾಸ್ಟಿಕ್ ಬಾಟಲಿಗಳು ಸೇರಿದಂತೆ ಗುಜರಿ ಸಾಮಗ್ರಿ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.