ETV Bharat / bharat

ಪಂಚರಾಜ್ಯಗಳ ಚುನಾವಣೆ ಘೋಷಣೆ: ಸಿಎಂ, ಮಾಜಿ ಸಿಎಂ, ಸಂಸದ ಹುರಿಯಾಳುಗಳ ಬಿಜೆಪಿ ಪಟ್ಟಿ ಬಿಡುಗಡೆ

author img

By PTI

Published : Oct 9, 2023, 8:18 PM IST

ಬಿಜೆಪಿ ಪಟ್ಟಿ ಬಿಡುಗಡೆ
ಬಿಜೆಪಿ ಪಟ್ಟಿ ಬಿಡುಗಡೆ

ಪಂಚರಾಜ್ಯಗಳ ಚುನಾವಣೆ ಘೋಷಣೆಯಾಗಿದೆ. ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 7ಕ್ಕೆ ಮಿಜೋರಾಂ ಮತ್ತು ಛತ್ತೀಸ್​​ಗಢ, ನವೆಂಬರ್ 23ಕ್ಕೆ ರಾಜಸ್ಥಾನ, ನವೆಂಬರ್ 30ಕ್ಕೆ ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ನವದೆಹಲಿ: ಪಂಚರಾಜ್ಯ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ತನ್ನ ಹುರಿಯಾಳುಗಳನ್ನು ಇಂದು ಪ್ರಕಟಿಸುತ್ತಿದೆ. ರಾಜಸ್ಥಾನದಲ್ಲಿ ಮೊದಲ ಪಟ್ಟಿಯಲ್ಲಿ 41 ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಮಧ್ಯಪ್ರದೇಶದಲ್ಲಿ 4 ನೇ ಪಟ್ಟಿಯಲ್ಲಿ 57, ಛತ್ತೀಸ್​ಗಢದಲ್ಲಿ ಎರಡನೇ ಪಟ್ಟಿಯಲ್ಲಿ 64 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತು. ಇದರಲ್ಲಿ ಹಲವು ಸಂಸದರು ಮತ್ತು ಮಾಜಿ ಮುಖ್ಯಮಂತ್ರಿಗಳಿಗೆ ಮಣೆ ಹಾಕಲಾಗಿದೆ.

  • BJP releases a list of 57 candidates for the upcoming election in Madhya Pradesh.

    CM Shivraj Singh Chouhan to contest from Budhni, State's HM Narottam Mishra to contest from Datia, Gopal Bhargava from Rehli, Vishwas Sarang from Narela and Tulsiram Silavat to contest from Sanwer pic.twitter.com/BxnfNqLKg1

    — ANI (@ANI) October 9, 2023 " class="align-text-top noRightClick twitterSection" data=" ">

ಮಧ್ಯಪ್ರದೇಶ ಅಭ್ಯರ್ಥಿಗಳ ಪಟ್ಟಿ: ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಸೇರಿದಂತೆ 24 ಸಚಿವರನ್ನೊಳಗೊಂಡ 57 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಸಿಎಂ ಚೌಹಾಣ್ ಅವರು ಬುಧ್ನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದರೆ, ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ದಾತಿಯಾ ಕ್ಷೇತ್ರದ ಟಿಕೆಟ್​ ನೀಡಲಾಗಿದೆ. 24 ಸಚಿವರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಹಿರಿಯ ನಾಯಕರನ್ನು ಒಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಅಖೈರು ಮಾಡಿದೆ. ಇದರೊಂದಿಗೆ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪಕ್ಷ ಇದುವರೆಗೆ 136 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದೆ.

  • BJP releases a list of 41 candidates for the upcoming election in Rajasthan.

    Rajyavardhan Singh Rathore to contest from Jhotwara, Diya Kumari from Vidhyadhar Nagar, Baba Balaknath from Tijara, Hansraj Meena from Sapotra and Kirodi Lal Meena to contest from Sawai Madhopur. pic.twitter.com/S68CstH35Y

    — ANI (@ANI) October 9, 2023 " class="align-text-top noRightClick twitterSection" data=" ">

ರಾಜಸ್ಥಾನ ಅಭ್ಯರ್ಥಿಗಳ ಪಟ್ಟಿ: ನವೆಂಬರ್ 23 ರಂದು ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿತು. 41 ಹುರಿಯಾಳುಗಳ ಮೊದಲ ಪಟ್ಟಿಯಲ್ಲಿ 7 ಸಂಸದರಿಗೆ ಸ್ಥಾನ ನೀಡಲಾಗಿದೆ. ಅದರಲ್ಲಿ ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್, ದೇವ್‌ಜಿ ಪಟೇಲ್, ಭಾಗೀರಥ್ ಚೌಧರಿ, ಕರೋರಿ ಲಾಲ್ ಮೀನಾ, ನರೇಂದ್ರ ಕುಮಾರ್, ದಿಯಾ ಕುಮಾರಿ, ಬಾಬಾ ಬಾಲಕ್ ನಾಥ್ ಹೆಸರಿದೆ.

ಅಚ್ಚರಿಯ ಸಂಗತಿ ಎಂದರೆ, ಮಾಜಿ ಸಿಎಂ ವಸುಂಧರಾ ರಾಜೇ, ಪ್ರತಿಪಕ್ಷ ನಾಯಕ ರಾಜೇಂದ್ರ ರಾಥೋಡ್​, ಉಪನಾಯಕ ಸತೀಶ್​ ಪೂನಿಯಾ ಅವರ ಹೆಸರು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ರಾಜಸ್ಥಾನ 200 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.

ಛತ್ತೀಸ್‌ಗಢ ಅಭ್ಯರ್ಥಿಗಳು: ಛತ್ತೀಸ್​ಗಢ ವಿಧಾನಸಭೆ ಚುನಾವಣೆಗೆ ಮುಹೂರ್ತ ಪ್ರಕಟವಾದ ಕೂಡಲೇ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 64 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಮೂವರು ಸಂಸದರು, 15 ಮಾಜಿ ಸಚಿವರಿಗೆ ಟಿಕೆಟ್ ನೀಡಲಾಗಿದೆ. ರಾಜನಂದಗಾಂವ್​ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳಿಗೂ ಮಣೆ ಹಾಕಲಾಗಿದೆ. ಮೊದಲ ಪಟ್ಟಿಯಲ್ಲಿ 21 ಹುರಿಯಾಳುಗಳನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ... ಛತ್ತೀಸ್​ಗಢದಲ್ಲಿ 2ಹಂತದ ವೋಟಿಂಗ್​.. ಡಿಸೆಂಬರ್ 3ಕ್ಕೆ ಚುನಾವಣಾ ಫಲಿತಾಂಶ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.