ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್​ ವೈದ್ಯರ ಮಾಹಿತಿ

author img

By

Published : Oct 14, 2021, 4:28 AM IST

former-pm-manmohan-singhs-condition-stable-aiims-officials

ಬುಧವಾರ ಸಂಜೆ ದೆಹಲಿಯ ಏಮ್ಸ್​​ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್​ ಸಿಂಗ್ ಅವರ ಆರೋಗ್ಯವು ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನವದೆಹಲಿ: ಜ್ವರ ಹಾಗೂ ಆಯಾಸದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್​ ಸಿಂಗ್​​ ಬುಧವಾರ ಸಂಜೆ ದೆಹಲಿಯ ಏಮ್ಸ್​​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವು ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.

ಮನಮೋಹನ್​ ಸಿಂಗ್ ಅವರು​​ ಜ್ವರದ ಬಗ್ಗೆ ಪರೀಕ್ಷೆಗಾಗಿ ದೆಹಲಿಯ ಏಮ್ಸ್​ಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಪಕ್ಷ ಪ್ರಕಟಣೆ ಸಹ ಹೊರಡಿಸಿದ್ದು, ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿಸಿತ್ತು. ಆಲ್​ ಇಂಡಿಯಾ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್​ ಸೈನ್ಸ್​​ನ ಹೃದ್ರೋಗ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

88 ವರ್ಷದ ಮಾಜಿ ಪ್ರಧಾನಿ ಈ ಹಿಂದೆ ಕೂಡ ಕೋವಿಡ್​ ಸೋಂಕಿನಿಂದಾಗಿ ಏಮ್ಸ್​​ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ಅವರು, ಕೆಲ ದಿನಗಳ ನಂತರ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಏಮ್ಸ್​ ಆಸ್ಪತ್ರೆಗೆ ದಾಖಲಾದ ಮಾಜಿ ಪಿಎಂ ಮನಮೋಹನ್ ಸಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.