ETV Bharat / bharat

UP Election : 32 ವರ್ಷಗಳ ಕಾಲ ಕಾಂಗ್ರೆಸ್​​ನಲ್ಲಿದ್ದು, ದಿಢೀರ್​​ ಆಗಿ ಬಿಜೆಪಿ ಸೇರಿದ ಕೇಂದ್ರದ ಮಾಜಿ ಸಚಿವ RPN ಸಿಂಗ್​

author img

By

Published : Jan 25, 2022, 3:51 PM IST

Updated : Jan 25, 2022, 4:03 PM IST

RPN Singh joins BJP
RPN Singh joins BJP

RPN Singh joins BJP : ಕಾಂಗ್ರೆಸ್ ಪಕ್ಷದಿಂದ ಮೂರು ಅವಧಿಗೆ ಶಾಸಕರಾಗಿದ್ದ ಇವರು, 2009ರಲ್ಲಿ ಉತ್ತರಪ್ರದೇಶ ಖುಷಿ ನಗರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಇವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದರು..

ನವದೆಹಲಿ : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ವಿವಿಧ ಪಕ್ಷದ ಮುಖಂಡರ ಪಕ್ಷಾಂತರ ಪರ್ವ ಕೂಡ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿಗೆ ಶಾಕ್​ ನೀಡಿ ಸ್ವಾಮಿ ಪ್ರಸಾದ್​ ಮೌರ್ಯ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿಕೊಂಡಿದ್ದರು. ಇದೀಗ, ಕಾಂಗ್ರೆಸ್​ಗೆ ಕೈಕೊಟ್ಟಿರುವ ಕೇಂದ್ರದ ಮಾಜಿ ಸಚಿವ ಆರ್​ಪಿಎನ್​ ಸಿಂಗ್​ ಇಂದು ದಿಢೀರ್​ ಆಗಿ ಬಿಜೆಪಿ ಸೇರಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ಆರ್​ಪಿಎನ್​ ಸಿಂಗ್​ ಅವರನ್ನ ಉತ್ತರಪ್ರದೇಶ ಚುನಾವಣೆಯ ಸ್ಟಾರ್​ ಪ್ರಚಾರಕರಾಗಿ ನೇಮಕ ಮಾಡಿತ್ತು. ಇದರ ಬೆನ್ನಲ್ಲೇ ಕೈ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿಕೊಂಡಿದ್ದಾರೆ. ಈ ಮೂಲಕ ಕಳೆದ 32 ವರ್ಷಗಳ ಕಾಲ ಕಾಂಗ್ರೆಸ್​ ಜೊತೆಗಿನ ಸಂಬಂಧವನ್ನ ಕಡಿದುಕೊಂಡಿದ್ದಾರೆ.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಆರ್​ಎನ್​ಪಿ ಸಿಂಗ್​​

ಆರ್​​ಪಿಎನ್​ ಸಿಂಗ್​ ಅವರಿಗೆ ಪಕ್ಷದ ಬಾವುಟ ನೀಡಿ ಧರ್ಮೇಂದ್ರ ಪ್ರಧಾನ್​ ಬರಮಾಡಿಕೊಂಡರು. ಇವರ ಜೊತೆಗೆ ಉತ್ತರಪ್ರದೇಶ ಕಾಂಗ್ರೆಸ್ ವಕ್ತಾರ ಶಶಿ ವಾಲಿ ಹಾಗೂ ರಾಜ್ಯ ಕಾಂಗ್ರೆಸ್​​ ಕಾರ್ಯದರ್ಶಿ ರಾಜೇಂದ್ರ ಆಹ್ವಾನ್​ ಕೂಡ ಬಿಜೆಪಿ ಸೇರಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ, ಅನುರಾಗ್ ಠಾಕೂರ್​ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪಕ್ಷ ಸೇರಿದ ಬಳಿಕ ಮಾತನಾಡಿರುವ ಆರ್​ಪಿಎನ್​ ಸಿಂಗ್​, ಕಳೆದ 32 ವರ್ಷಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಪಕ್ಷದಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. ಈ ಹಿಂದೆ ಇರುವ ಸ್ಥಿತಿಯಲ್ಲೇ ಈಗಲೂ ಇದೆ. ದೇಶದ ಅಭಿವೃದ್ಧಿ ಹಿತಾಸಕ್ತಿಯಿಂದ ನಾನು ಬಿಜೆಪಿ ಸೇರುತ್ತಿರುವೆ. ಪ್ರಧಾನಿ ಮೋದಿ ಅವರ ಮುಂದಾಳತ್ವದಲ್ಲಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿರುವ ಆರ್​ಎನ್​ಪಿ ಸಿಂಗ್

  • This is a new beginning for me and I look forward to my contribution to nation building under the visionary leadership & guidance of the Honourable Prime Minister Shri @narendramodi, BJP President Shri @JPNadda ji & Honourable Home Minister @AmitShah ji.

    — RPN Singh (@SinghRPN) January 25, 2022 " class="align-text-top noRightClick twitterSection" data=" ">

ಬಿಜೆಪಿ ಸೇರುವುದಕ್ಕೂ ಕೆಲ ಗಂಟೆಗಳ ಮುಂಚಿತವಾಗಿ ಆರ್​ಎನ್​ಪಿ ಸಿಂಗ್​​ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದು, ಅದನ್ನ ಟ್ವಿಟರ್​​ನಲ್ಲೂ ಹಂಚಿಕೊಂಡಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂದಿನಿಂದ ಹೊಸ ಅಧ್ಯಾಯ ಆರಂಭಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ - ವಿಡಿಯೋ ವೈರಲ್​!

ಕಾಂಗ್ರೆಸ್ ಪಕ್ಷದಿಂದ ಮೂರು ಅವಧಿಗೆ ಶಾಸಕರಾಗಿದ್ದ ಇವರು, 2009ರಲ್ಲಿ ಉತ್ತರಪ್ರದೇಶ ಖುಷಿ ನಗರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಇವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated :Jan 25, 2022, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.