ETV Bharat / bharat

ಸತತ 6ನೇ ದಿನ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ: ದೇಶದ ಮಹಾನಗರಗಳಲ್ಲಿ ತೈಲ ದರ ಹೀಗಿದೆ..

author img

By

Published : Oct 10, 2021, 9:50 AM IST

petrol
petrol

ತೈಲ ದರ ಸತತವಾಗಿ ಏರಿಕೆಯಾಗುತ್ತಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳ ತೈಲ ದರದ ಮಾಹಿತಿ ಇಲ್ಲಿದೆ.

ನವದೆಹಲಿ: ದೇಶದಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗಿದೆ. ಪ್ರತಿ ಲೀಟರ್ ಪೆಟ್ರೋಲ್​​ ಮೇಲೆ 30 ಪೈಸೆ ಹಾಗೂ ಡೀಸೆಲ್​ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 30 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 104.14 ರೂಪಾಯಿ ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್​ ದರ 92.82 ರೂಪಾಯಿ ಇದೆ.

ಮುಂಬೈನಲ್ಲಿ 29 ಪೈಸೆ ಪೆಟ್ರೋಲ್ ದರ ಹೆಚ್ಚಳ ಮಾಡಿದ್ದು ಲೀಟರ್ ಪೆಟ್ರೋಲ್​ಗೆ 110.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.66 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ನೂರರ ಗಡಿ ದಾಟಿದ್ದು, ಇಂದು 37 ಪೈಸೆ ಡೀಸೆಲ್ ದರ ಏರಿಕೆಯಾಗಿದೆ.

ಇಂದಿನ ತೈಲ ದರದ ಮಾಹಿತಿ
ಇಂದಿನ ತೈಲ ದರದ ಮಾಹಿತಿ

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.77 ರೂಪಾಯಿ ಇದ್ದು ಡೀಸೆಲ್‌ 98.52 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.93 ರೂಪಾಯಿಗೆ ಏರಿಕೆ ಆಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.53 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.26 ರೂಪಾಯಿಗೆ ಏರಿಕೆಯಾಗಿದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ. ಎಲ್ಲಾ ರಾಜ್ಯಗಳಲ್ಲೂ ಈಗಾಗಲೇ ಪೆಟ್ರೋಲ್​ ಬೆಲೆ ಶತಕದ ಗಡಿ ದಾಟಿದ್ದು, ಇಂದಿನಿಂದ ಮುಂಬೈನಲ್ಲಿ ಡೀಸೆಲ್​ ಬೆಲೆ ಸಹ ನೂರರ ಗಡಿ ದಾಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.