ETV Bharat / bharat

ಇಂಧನ ಮಾಲೀಕರ ಮುಷ್ಕರದ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಯಥಾಸ್ಥಿತಿ

author img

By

Published : May 31, 2022, 8:30 AM IST

Updated : May 31, 2022, 10:27 AM IST

Petrol and Diesel Prices Today, Fuel prices remained unchanged on Monday, Petrol and Diesel Prices Karnataka statewide today, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು, ಸೋಮವಾರ ಇಂಧನ ಬೆಲೆಗಳು ಯಥಾಸ್ಥಿತಿ, ಇಂದು ಕರ್ನಾಟಕ ರಾಜ್ಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ,
ಇಂದು ಇಂಧನ ಮಾಲೀಕರ ಮುಷ್ಕರ

ಇಂದು ದೇಶವ್ಯಾಪಿ ಇಂಧನ ಬಂಕ್​ ಮಾಲೀಕರು ಮತ್ತು ಡಿಲೀರ್​ಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಮಧ್ಯೆ ದೇಶ ಮತ್ತು ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ಬೆಲೆ ಹೀಗಿದೆ.

ನವದೆಹಲಿ/ಬೆಂಗಳೂರು: ದೇಶದಲ್ಲಿ ಇಂಧನ ದರಗಳು ಪ್ರತಿದಿನವೂ ಪರಿಷ್ಕರಿಸಲ್ಪಡುತ್ತವೆ. ಬೆಳಗ್ಗೆ 06:00 ಗಂಟೆಗೆ ಹೊಸ ಬೆಲೆಗಳನ್ನು ನಾವು ಕಾಣುತ್ತಿದ್ದೇವೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ..

ಇದನ್ನೂ ಓದಿ: ಮೇ 31ಕ್ಕೆ ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆ: ತೈಲ ಖರೀದಿ ಸ್ಥಗಿತ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ ಆಗಿದ್ದರೆ, ಡೀಸೆಲ್ ಬೆಲೆ 92.76 ರೂ ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.94 ರೂ. ಮಾರಾಟವಾಗುತ್ತಿದ್ದರೆ, ಡೀಸೆಲ್ ದರ 87.89ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಲೀಟರ್​ಗೆ 101.13 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 87.13 ರೂಪಾಯಿ ಇದೆ.

ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 101.44 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 87.43 ರೂಪಾಯಿ ಇದೆ. ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 103.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 89.14 ರೂಪಾಯಿ ಇದೆ.

Last Updated :May 31, 2022, 10:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.