ETV Bharat / bharat

ದೇಶದೆಲ್ಲೆಡೆ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ..

author img

By

Published : Jun 3, 2022, 9:32 AM IST

Petrol and Diesel Prices Today, Fuel prices remained unchanged on Monday, Petrol and Diesel Prices Karnataka statewide today, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು, ಸೋಮವಾರ ಇಂಧನ ಬೆಲೆಗಳು ಯಥಾಸ್ಥಿತಿ, ಇಂದು ಕರ್ನಾಟಕ ರಾಜ್ಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ,
ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ..

ನವದೆಹಲಿ/ಬೆಂಗಳೂರು : ದೇಶದಲ್ಲಿ ಇಂಧನ ದರಗಳು ಪ್ರತಿದಿನವೂ ಪರಿಷ್ಕರಿಸಲ್ಪಡುತ್ತವೆ. ಬೆಳಗ್ಗೆ 6:00 ಗಂಟೆಗೆ ಹೊಸ ಬೆಲೆಗಳನ್ನು ನಾವು ಕಾಣುತ್ತಿದ್ದೇವೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ..

ಓದಿ: ಪೆಟ್ರೋಲ್, ಡೀಸೆಲ್ ದರ ಸ್ಥಿರ.. ಇಂದಿನ ತೈಲ ಬೆಲೆ ಹೀಗಿದೆ ನೋಡಿ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.94 ರೂ. ಮಾರಾಟವಾಗುತ್ತಿದ್ದರೆ, ಡೀಸೆಲ್ ದರ 87.89ರೂ.ಗೆ ಮಾರಾಟವಾಗುತ್ತಿದೆ.

ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಲೀಟರ್​ಗೆ 101.14 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 87.14 ರೂಪಾಯಿ ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 101.44 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 87.43 ರೂಪಾಯಿ ಇದೆ. ದಾವಣಗೆರೆಯಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 103.60 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 89.52 ರೂಪಾಯಿ ಇದೆ. ಕ್ರೂಡ್ ಆಯಿಲ್​ ಕಳೆದ ಕೆಲವು ವಹಿವಾಟು ಅವಧಿಗಳಲ್ಲಿ ಏರಿಕೆಯಾದ ನಂತರ ಶುಕ್ರವಾರ ತೈಲ ಬೆಲೆಗಳು ಸ್ಥಿರವಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.