ETV Bharat / bharat

ಕೇಂದ್ರ ಸರ್ಕಾರದಿಂದ ದೀಪಾವಳಿ ಬಂಪರ್​: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ

author img

By

Published : Nov 3, 2021, 9:12 PM IST

Govt of India reducing central excise duty on petrol & diesel
ದೇಶದಲ್ಲಿ ನಾಳೆಯಿಂದಲೇ ಪೆಟ್ರೋಲ್, ಡಿಸೇಲ್ ದರ ಇಳಿಕೆ: ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ

ತೈಲ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಸಾಕಷ್ಟು ದಿನಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ.

ನವದೆಹಲಿ: ಸಾಕಷ್ಟು ದಿನಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ. ನಾಳೆಯಿಂದಲೇ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಾರಿಯ ದೀಪಾವಳಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್​ ನೀಡಿದೆ.

ನಾಳೆಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ರೂಪಾಯಿ ಮತ್ತು 10 ರೂಪಾಯಿ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಮೂಲಕ ಗ್ರಾಹಕರ ಮೇಲಿದ್ದ ಹೊರೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದೆ. ಅಷ್ಟೇ ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ (ಮೌಲ್ಯ ವರ್ಧಿತ ತೆರಿಗೆ-VAT) ಅನ್ನು ಕಡಿಮೆ ಮಾಡಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒತ್ತಾಯಿಸಿದೆ.

ಇದನ್ನೂ ಓದಿ:ಕಾಕತಾಳೀಯವೋ, 'ಸತಿ'ಯ ಶಾಪವೋ: ಈ ಗ್ರಾಮದಲ್ಲಿ ದೀಪಾವಳಿಯೇ ಆಚರಿಸಲ್ಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.