ETV Bharat / bharat

ಗುಜರಾತ್ ವಿಧಾನಸಭಾ ಚುನಾವಣೆ: ಡಿ.5ಕ್ಕೆ ನಿಶಾನ್​ ಶಾಲೆಯಲ್ಲಿ ಪ್ರಧಾನಿ ಮೋದಿ ಮತದಾನ

author img

By

Published : Dec 3, 2022, 3:48 PM IST

Updated : Dec 3, 2022, 7:09 PM IST

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ

ಸಬರಮತಿ ವಿಧಾನಸಭಾ ಕ್ಷೇತ್ರದಿಂದ ಮತದಾರರಾಗಿ ನೋಂದಣಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ರಾನಿಪ್‌ನ ನಿಶಾನ್ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದಾರೆ. ಇಂದು ಎರಡನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಅಹಮದಾಬಾದ್​​​: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. 93 ಸ್ಥಾನಗಳಿಗೆ ನಡೆಯಲಿರುವ ಮತದಾನದಲ್ಲಿ ವಿಧಾನಸಭಾ ಕ್ಷೇತ್ರ ಸಬರಮತಿಯಿಂದ ಮೋದಿ ಮತದಾರರಾಗಿ ನೋಂದಣಿಯಾಗಿದ್ದಾರೆ.

ಪ್ರಧಾನಿ ಮೋದಿ ರಾನಿಪ್‌ನ ನಿಶಾನ್ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮತದಾನ ನಡೆದಿದೆ.

ಚುನಾವಣಾ ಪ್ರಚಾರಕ್ಕೆ ತೆರೆ: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭೆಯ 2ನೇ ಹಂತದ ಚುನಾವಣಾ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಮತದಾರರ ಮನ ಗೆಲ್ಲಲು ಎಲ್ಲ ಅಭ್ಯರ್ಥಿಗಳು ಕೊನೆಯ ಹಂತದ ಪ್ರಯತ್ನ ನಡೆಸಿದ್ದಾರೆ.

ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನ 89 ಸ್ಥಾನಗಳಿಗೆ ಡಿಸೆಂಬರ್ 01 ರಂದು ಮತದಾನ ನಡೆದಿದ್ದು ಶೇ.63.31 ಮತದಾನವಾಗಿದೆ. ಸೋಮವಾರ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿಸೆಂಬರ್ 8 ರಂದು ಪ್ರಕಟವಾಗಲಿದೆ. ಒಂದನೇ ಹಂತದ ಮತದಾನ ಡಿಸೆಂಬರ್‌ 01ರಂದು ನಡೆದಿದೆ. ಗುಜರಾತ್ ವಿಧಾನಸಭೆಯ 182 ಸ್ಥಾನಗಳಲ್ಲಿ 13 ಸ್ಥಾನಗಳು ಎಸ್‌ಸಿ ಹಾಗೂ 27 ಎಸ್‌ಟಿಗಳಿಗೆ ಮೀಸಲಾಗಿದೆ.

14 ಜಿಲ್ಲೆಗಳ ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಬೆಳಗ್ಗೆ 8 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಎರಡನೇ ಹಂತದ ಚುನಾವಣೆಯ ಪ್ರಚಾರ ಇಂದು ಸಂಜೆ 5 ಗಂಟೆ ಅಂತಿಮವಾಗಿ ತರೆ ಬಿತ್ತು.

ಇದನ್ನೂ ಓದಿ: ಗುಜರಾತ್​ ಚುನಾವಣೆ: ತಮ್ಮ ಜೀವನದ ಮೊದಲ ಮತ ಚಲಾಯಿಸಿದ ಪಾಕಿಸ್ತಾನದ ಮಹಿಳೆ

Last Updated :Dec 3, 2022, 7:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.