ETV Bharat / bharat

ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್ : ಮೂವರು ಉಗ್ರರ ಬಂಧನ

author img

By

Published : Jun 23, 2021, 9:10 PM IST

ಪೊಲೀಸ್ ಪಡೆ ಮತ್ತು ಸೇನೆಯು ಭಯೋತ್ಪಾದಕರಿರುವ ಜಾಗವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಪ್ರಕಾರ ಕಾರ್ಯಾಚರಣೆಯಲ್ಲಿ ಇಬ್ಬರಿಂದ ಮೂವರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ..

ದಕ್ಷಿಣ ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್
ದಕ್ಷಿಣ ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶಿರ್ಮಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶೋಪಿಯಾನ್‌ನ ಶಿರ್ಮಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸುತ್ತಿದ್ದೇವೆ ಎಂದು ಕಾಶ್ಮೀರ ವಲಯ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಪಡೆ ಮತ್ತು ಸೇನೆಯು ಭಯೋತ್ಪಾದಕರಿರುವ ಜಾಗವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಪ್ರಕಾರ ಕಾರ್ಯಾಚರಣೆಯಲ್ಲಿ ಇಬ್ಬರಿಂದ ಮೂವರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

ಓದಿ:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ಸಮುದ್ರಕ್ಕೆ‌‌ ಹಾರಿ‌ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.