ETV Bharat / bharat

ಸೆಲ್ಫಿ ತೆಗೆಯುತ್ತಿದ್ದ ವೇಳೆ ರೈಲಿಗೆ ಸಿಲುಕಿ ನಾಲ್ವರು ಯುವಕರು ಸಾವು

author img

By

Published : Feb 16, 2022, 8:26 AM IST

ದೆಹಲಿ ಹೊರವಲಯದಲ್ಲಿರುವ ಗುರುಗ್ರಾಮ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ (ಆರ್‌ಒಬಿ) ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರಿಗೆ ರೈಲು ಡಿಕ್ಕಿ ಹೊಡೆಯಿತು.

Four youths killed by train while taking selfies
ಸಾಂದರ್ಭಿಕ ಚಿತ್ರ

ಗುರುಗ್ರಾಮ್ (ದೆಹಲಿ): ಮಂಗಳವಾರ ಸಂಜೆ ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆಯುತ್ತಿದ್ದ ನಾಲ್ವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಬಸಾಯಿ ರೈಲು ನಿಲ್ದಾಣದ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ (ROB) ಬಳಿ ಈ ದುರ್ಘಟನೆ ನಡೆದಿದೆ.

ಮೃತರನ್ನು ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.

ಸರ್ಕಾರಿ ರೈಲ್ವೆ ಪೊಲೀಸರ (ಜಿಆರ್‌ಪಿ) ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ್​​ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ನಿಂತಿದ್ದ ಟ್ರ್ಯಾಕ್ಟರ್​ಗೆ ವ್ಯಾನ್ ಡಿಕ್ಕಿ: ನಾಲ್ವರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.