ETV Bharat / bharat

ತಮಿಳುನಾಡಿನಲ್ಲಿ ಮಳೆ ಅಬ್ಬರ: ಇಬ್ಬರು ಸಾವು, 18 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್, ಶಾಲೆಗಳಿಗೆ ರಜೆ

author img

By ETV Bharat Karnataka Team

Published : Nov 4, 2023, 9:13 AM IST

Rain in Tamilnadu: ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ.

heavy rain 9 districts  heavy rain 9 districts school holiday  school holiday in Tamil Nadu  ತಮಿಳುನಾಡಿನಲ್ಲಿ ಧಾರಾಕಾರ ಮಳೆ  18 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್  9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ  ತಮಿಳುನಾಡಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ  18 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಸುಮಾರು 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ  ನವೆಂಬರ್​ 6ರವರೆಗೆ ಆರೆಂಜ್​ ಅಲರ್ಟ್​ ಸಿಡಿಲಿಗೆ ಇಬ್ಬರು ಬಲಿ
ತಮಿಳುನಾಡಿನಲ್ಲಿ ಧಾರಾಕಾರ ಮಳೆ

ಚೆನ್ನೈ, ತಮಿಳುನಾಡು: ತಮಿಳುನಾಡಿನಲ್ಲಿ ಧಾರಾಕಾರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ತಮಿಳುನಾಡಿನ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಕಟ್ಟೆಚ್ಚರ ವಹಿಸಿದೆ.

ಶಾಲಾ-ಕಾಲೇಜುಗಳಿಗೆ ರಜೆ: ನಿರಂತರ ಭಾರೀ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ನೆಲ್ಲೈ, ಕನ್ಯಾಕುಮಾರ್, ಥೇಣಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. 6ರ ವರೆಗೆ ತಮಿಳುನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯೂ ಪ್ರಕಟಿಸಿದೆ. ಅಲ್ಲದೆ, ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಕೆಲ ದಿನಗಳಿಂದ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸತತ ಭಾರೀ ಮಳೆಯಿಂದಾಗಿ ನೆಲ್ಲೈ, ತೆಂಕಶಿ, ಥೇಣಿ, ದಿಂಡಿಗಲ್ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಚೆನ್ನೈ, ಶಿವಗಂಗೈ, ಮಧುರೈ, ಕನ್ಯಾಕುಮಾರಿ ಮತ್ತು ಮೈಲಾಡುತುರೈನಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸಿಡಿಲಿಗೆ ಇಬ್ಬರು ಬಲಿ: ದಿಂಡಿಗಲ್​ ಜಿಲ್ಲೆಯಲ್ಲಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ನಿನ್ನೆ ಜಾನುವಾರುಗಳಿಗೆ ಮೇವು ಕಟ್​ ಮಾಡಲು ಹೊಲಕ್ಕೆ ಹೋದಾಗ ಧಾರಾಕಾರ ಮಳೆ ಸುರಿದಿದೆ. ಈ ವೇಳೆ ಅತ್ತೂರು ತಾಲೂಕಿನ ರೆಡಿಯಾರಚತ್ರಂ ದಡನಕೋಟೆ ನಿವಾಸಿ 27 ವರ್ಷದ ವಿಜಯಲಕ್ಷ್ಮಿ ಸಿಡಿಲಿನ ಅಬ್ಬರಕ್ಕೆ ಬಲಿಯಾಗಿದ್ದಾರೆ. ಅದರಂತೆ ಜಿಲ್ಲೆಯ ನಟ್ಟಂ ಬಳಿಯ ಕೊಟ್ಟೈಯೂರು ಮೂಲದ 35 ವರ್ಷದ ವೇಲ್ಮುರುಗನ್ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಸಂಜೆ ಗುಡುಗು ಸಹಿತ ಮಳೆಯಾಗುತ್ತಿದ್ದ ವೇಳೆ ಹಸುವನ್ನು ಕಟ್ಟಲು ಹೋಗಿದ್ದರು. ಈ ವೇಳೆ ಸಿಡಿಲಿನ ಹೊಡೆತಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನವೆಂಬರ್​ 6ರವರೆಗೆ ಆರೆಂಜ್​ ಅಲರ್ಟ್​: ಭಾರತೀಯ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಹೊರಡಿಸಿದ್ದು, ತಮಿಳುನಾಡಿನ ದಕ್ಷಿಣ ಜಿಲ್ಲೆಗಳು ಸೇರಿದಂತೆ 18 ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ತಮಿಳುನಾಡಿನಲ್ಲಿ ನವೆಂಬರ್​ 6ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯೂ ಪ್ರಕಟಿಸಿದೆ.

ಓದಿ: ಬಂಗಾಲ ಕೊಲ್ಲಿಯಲ್ಲಿ ಹಮೂನ್​ ಚಂಡಮಾರುತ ತೀವ್ರ: ಭಾರಿ ಮಳೆ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.