ಹಿಜಾಬ್ ಪ್ರಕರಣ: ವಿಚಾರಣೆ ಮುಂದುವರಿಸಿದ ಸುಪ್ರೀಂ ಕೋರ್ಟ್

author img

By

Published : Sep 20, 2022, 12:31 PM IST

Updated : Sep 20, 2022, 12:36 PM IST

ಹಿಜಾಬ್ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ಆರಂಭ
Karnataka hijab hearing started at supreme court ()

ಕರ್ನಾಟಕದ ಹಿಜಾಬ್ ವಿವಾದ ಕುರಿತ ವಿಚಾರಣೆಯು ಸುಪ್ರೀಂ ಕೋರ್ಟ್​ನಲ್ಲಿ ನಡೆಯುತ್ತಿದೆ.

ನವದೆಹಲಿ: ಕರ್ನಾಟಕದ ಹಿಜಾಬ್ ವಿವಾದ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ಆರಂಭವಾಗಿದೆ. ಅರ್ಜಿದಾರರ ಪರ ವಕೀಲ ದುಶ್ಯಂತ ದವೆ ವಾದ ಮಂಡನೆ ಮಾಡುತ್ತಿದ್ದಾರೆ.

ಸೋಮವಾರ, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಕಾಲೇಜು/ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸಿತು.

ನಿನ್ನೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ವೈವಿಧ್ಯತೆಯ ಬಗ್ಗೆ ವಾದಿಸಿದರು. ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವುದು ಯಾವುದೇ ವ್ಯಕ್ತಿಯ ಭಾವನೆಗಳನ್ನು ನೋಯಿಸುತ್ತದೆ ಎಂದು ಹೇಳಲಾಗುವುದಿಲ್ಲ. ಮೊದಲು ಲವ್ ಜಿಹಾದ್ ದೊಡ್ಡ ವಿಷಯವಾಗಿತ್ತು. ಈಗ ವಿಷಯ ಹಿಜಾಬ್ ಮೇಲಿನ ನಿಷೇಧದವರೆಗೆ ಬಂದಿದೆ. ಇದೆಲ್ಲವೂ ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ಕಡೆಗಣಿಸುವ ಹುನ್ನಾರವನ್ನು ಹೊಂದಿದೆ ಎಂದು ಹೇಳಿದರು.

ಪ್ರಸ್ತುತ ಮಂಗಳವಾರ ಸುಪ್ರೀಂ ಕೋರ್ಟ್​ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದುವರೆದಿದ್ದು, ವಾದ-ಪ್ರತಿವಾದಗಳು ನಡೆಯುತ್ತಿವೆ. ಇಂದಿನ ವಿಚಾರಣೆಯ ವಿವರಗಳು ಇನ್ನಷ್ಟೇ ಬರಲಿವೆ.

Last Updated :Sep 20, 2022, 12:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.